ಹುಟ್ಟೂರಿನ ಮಣ್ಣಲ್ಲೇ ಮಣ್ಣಾದ ಸಂಚಾರಿ ವಿಜಯ್ | ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಅಂತ್ಯಕ್ರಿಯೆ
15/06/2021
ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಮೃತಪಟ್ಟ ಸಂಚಾರಿ ವಿಜಯ್ ಅವರ ಅಂತ್ಯಸಂಸ್ಕಾರ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಪಂಚನಹಳ್ಳಿಯಲ್ಲಿ ನಡೆದಿದ್ದು, ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದೆ.
ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರ ಅವರ ಹುಟ್ಟೂರಿಗೆ ಆಗಮಿಸುತ್ತಿದ್ದಂತೇ, ಗ್ರಾಮಸ್ಥರು ಅಂತಿಮ ದರ್ಶನಕ್ಕಾಗಿ ಮುಗಿ ಬಿದ್ದಿದ್ದಾರೆ. ಪಂಚನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರರದ ಅಂತಿಮ ದರ್ಶನ ಪಡೆದರು.
ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀಗಳ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆದಿದೆ. ನಟ ಸಂಚಾರಿ ವಿಜಯ್ ಗೆಳೆಯ ರಘು ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಸಮಾಧಿಯಲ್ಲಿ ಇರಿಸಿ, ವಿಲ್ವ ಪತ್ರೆ, ವಿಭೂತಿಗಳಿಂದ ವಿಧಿ-ವಿಧಾನ ನೆರವೇರಿಸಿ, ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವನ್ನು ಗೌರವಪೂರ್ವಕವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ.