2 ವರ್ಷದ ಮಗನ ಮುಂದೆಯೇ ಮಹಿಳೆಯ ಮೇಲೆ 79 ದಿನಗಳ ಕಾಲ ಮಂತ್ರವಾದಿಯಿಂದ ಅತ್ಯಾಚಾರ!
ಬಾಲಾಸೋರ್: ಮಹಿಳೆಯೊಬ್ಬರನ್ನು ಮಂತ್ರವಾದಿಯೋರ್ವ ಸತತ 79 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದಿದ್ದು, ಮಹಿಳೆಯ 2 ವರ್ಷ ವಯಸ್ಸಿನ ಮಗುವಿನ ಎದುರೇ ಮಂತ್ರವಾದಿ ಮಹಿಳೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎನ್ನುವ ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ.
ಸಂತ್ರಸ್ತ ಮಹಿಳೆ ಹಾಗೂ ಆಕೆಯ ಪತಿಯ ಮನೆಯವರಿಗೆ ಮನಸ್ತಾಪವಿತ್ತೆನ್ನಲಾಗಿದ್ದು, ವರದಕ್ಷಿಣೆ ವಿಚಾರವಾಗಿ ಆಗಾಗ ಗಲಾಟೆಗಳು ನಡೆಯುತ್ತಿತ್ತು. ಹೀಗಾಗಿ ಈ ಸಮಸ್ಯೆ ಪರಿಹರಿಸಲು ಪತಿಯ ಮನೆಯವರು ಮಂತ್ರವಾದಿಯ ಮೊರೆ ಹೋಗಿದ್ದಾರೆನ್ನಲಾಗಿದೆ.
ಮನಸ್ತಾಪಗಳು ಕಳೆಯ ಬೇಕಾದರೆ, ಈ ಮಹಿಳೆ ಕೆಲವು ಕಾಲಗಳವರೆಗೆ ನನ್ನ ಜೊತೆಗಿದ್ದರೆ, ಮನಸ್ತಾಪ ಬಗೆಹರಿಯುತ್ತದೆ ಎಂದು ಹೇಳಿದ್ದು, ಇದನ್ನು ಮಹಿಳೆ ವಿರೋಧಿಸಿದಾಗ, ಮಹಿಳೆಗೆ ಮತ್ತು ಬರುವ ಔಷಧಿ ನೀಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ಹೇಳಿದ್ದು, ಎಚ್ಚರವಾದ ವೇಳೆ ತಾನು ಮಂತ್ರವಾದಿಯ ಮನೆಯಲ್ಲಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಮಂತ್ರವಾದಿಯು ಮನೆಯಲ್ಲಿ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ. ನನ್ನ ಮಗುವಿನ ಎದುರೇ ನನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದ. ಹೀಗೆ 79 ದಿನಗಳ ಮೇಲೆ ಅಮಾನವೀಯವಾಗಿ ಅತ್ಯಾಚಾರ ನಡೆಸಿದ್ದ ಏಪ್ರಿಲ್ 28ರಂದು ಮಂತ್ರವಾದಿ ತನ್ನ ಮೊಬೈಲ್ ಮನೆಯಲ್ಲೇ ಬಿಟ್ಟು ಹೋಗಿದ್ದ. ಈ ವೇಳೆ ತಾನು ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಇನ್ನೂ ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಪೊಲೀಸರು ಆಗಮಿಸುವಷ್ಟರಲ್ಲಿ ಆರೋಪಿ ಮಂತ್ರವಾದಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಯಾರನ್ನು ಬಂಧಿಸಿಲ್ಲ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉಡುಪಿ: ಕಾಂಗ್ರೆಸ್ ತೊರೆದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್
ಕಾಡಿನಲ್ಲಿ ಏಕಾಂತದಲ್ಲಿದ್ದ ಪ್ರೇಮಿಗಳ ಮೇಲೆ ಹುಲಿ ದಾಳಿ: ಯುವಕ ಸಾವು
ತೀವ್ರ ಸ್ವರೂಪ ಪಡೆದುಕೊಂಡ ಪ್ರಜೆಗಳ ಹೋರಾಟ: ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ
ಮತ್ತೊಮ್ಮೆ ಗ್ರಾಹಕನ ಕೈ ಸುಟ್ಟ ಎಲ್ ಪಿಜಿ ಸಿಲಿಂಡರ್ ಬೆಲೆ: 50ರೂ. ಏರಿಕೆ