ಮಸೂದ್ ಹತ್ಯೆ ಪ್ರಕರಣ: 8 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿದ್ದ ಎಲ್ಲಾ 8 ಮಂದಿ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ.
ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಅಭಿಲಾಶ್, ಸುನಿಲ್ ಕೆ., ಸುಧೀರ್, ಶಿವಪ್ರಸಾದ್, ರಂಜಿತ್ ಬಿ., ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ.ಎಂ. ಇವರ ಮೇಲೆ ಕೊಲೆ ಪ್ರಕರಣ ದಾಖಲಾಗಿದ್ದು, ಬಂಧಿತರಾದ ಆರೋಪಿಗಳು ನ್ಯಾಯಾಂಗ ಕಸ್ಟಡಿಯಲ್ಲಿದ್ದರು.
ಮಂಗಳವಾರ ನ್ಯಾಯಾಂಗ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka