ಮಾರಕಾಸ್ತ್ರಗಳಿಂದ ಕೊಚ್ಚಿ ಬಾಡಿ ಬಿಲ್ಡರ್ ನ ಬರ್ಬರ ಹತ್ಯೆ!
ದಾವಣಗೆರೆ: ದೇಹದಾರ್ಡ್ಯ ಪಟುವೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿ ದುರ್ಗದ ದೇವಸ್ಥಾನದ ಸಮೀಪದ ಹಾಲಮ್ಮನ ತೋಪಿನ ಬಳಿ ನಡೆದಿದೆ.
ದಾವಣಗೆರೆ ನಗರದ ನಿಟುವಳ್ಳಿಯ ಧನ್ಯಕುಮಾರ್ ಹತ್ಯೆಗೀಡಾದ ಯುವಕನಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತರೇ ಆತನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬುಧವಾರ ಯುವಕನೊಬ್ಬನ ಜತೆ ಉಚ್ಚಂಗಿದುರ್ಗಕ್ಕೆ ಹೋಗಿ ಬರುವುದಾಗಿ ತನ್ನ ಸ್ನೇಹಿತರ ಬಳಿ ಧನ್ಯಕುಮಾರ್ ಹೇಳಿದ್ದ ಎನ್ನಲಾಗಿದೆ. ಇದಾದ ಬಳಿಕ ಧನ್ಯಕುಮಾರ್ ಮೃತದೇಹ ಮಾರಕಾಸ್ತ್ರಗಳಿಂದ ಕೊಚ್ಚಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ದೇಹದಾರ್ಡ್ಯ ಪಟುವಾಗಿದ್ದ ಧನ್ಯಕುಮಾರ್, ಹಲವಾರು ದೇಹದಾರ್ಡ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದರು. ಆದರೆ ಅವರ ಕೊಲೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಘಟನೆ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬ್ಯಾನರ್ ಹಾನಿಗೊಳಿಸಿದ್ದಕ್ಕೆ ಅಪ್ರಾಪ್ತ ಮಕ್ಕಳನ್ನು ಪೋಲಿಸ್ ಠಾಣೆಯಲ್ಲಿ ಕೂರಿಸಿದ ಪೊಲೀಸರು
ಭ್ರಷ್ಟರು ಒಂದೇ ಪಕ್ಷಕ್ಕೆ ಸೀಮಿತವಾಗಿಲ್ಲ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕೆಲಸ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಆಟೋ ಚಾಲಕ, ಆತನ ಸ್ನೇಹಿತನಿಂದ ಅತ್ಯಾಚಾರ
ಆಟೋರಿಕ್ಷಾ ಸ್ಕೂಟರ್ ಗೆ ಡಿಕ್ಕಿ: ಇಬ್ಬರು ಧರ್ಮಗುರುಗಳಿಗೆ ಗಾಯ
ಮಲಬಾರ್ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಳಗೆ ಅಪರಿಚಿತ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ