ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳು ಅರೆಸ್ಟ್
ಕೊಟ್ಟಿಗೆಹಾರ: ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಸನ ಕುಡಿಗೆಯಲ್ಲಿ ನಡೆದಿದೆ.
ಶಿವಮೊಗ್ಗದ ಮೊಹಮ್ಮದ್ ಪರ್ವೀಜ್ (40) ಹಾಗೂ ಶ್ರೀನಿವಾಸ (30) ಬಂಧಿತ ಆರೋಪಿಗಳು.
ಬಾಳೂರಿನ ಬಾಸನ ಕುಡಿಗೆಯ ರಸ್ತೆ ಬಳಿ ಆಟೋ ನಿಲ್ಲಿಸಿಕೊಂಡು ನಿಂತಿದ್ದ ವೇಳೆ ಗಸ್ತು ತಿರುಗುತಿದ್ದ ಬಾಳೂರು ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ಹಾಗೂ ಪೊಲೀಸರು ಅನುಮಾನಗೊಂಡು ಆಟೋರಿಕ್ಷಾ ತಪಾಸಣೆ ಮಾಡಿದಾಗ 195 ಗ್ರಾಂ ತೂಕದ ಗಾಂಜಾ ಸೊಪ್ಪು, ಸುತ್ತಲೂ ಬಳಸುವ ಟಿಪ್ಸ್, ಗಾಂಜಾ ಬಳಸುವ ಚಿಮಣಿ ಪತ್ತೆಯಾಗಿದೆ.
ಕೂಡಲೇ ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಂದ ಗಾಂಜಾ ಸೊಪ್ಪು, ಸುತ್ತಲೂ ಬಳಸುವ ಟಿಪ್ಸ್, ಗಾಂಜಾ ಬಳಸುವ ಚಿಮಣಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: