ಮಸೀದಿ ಧ್ವನಿ ವರ್ಧಕ ತೆರವಿಗೆ ಆಗ್ರಹ: ಸಚಿವ ಈಶ್ವರಪ್ಪ, ಕುಮಾರಸ್ವಾಮಿ ಏನು ಹೇಳಿದರು?
ಬೆಂಗಳೂರು: ಯುಗಾದಿ ವೇಳೆ ಆರಂಭವಾಗಿದ್ದ ಹಲಾಲ್ ಕಟ್, ಜಟ್ಕಾ ಕಟ್ ವಿವಾದ ಮುಗಿಯುತ್ತಿದ್ದಂತೆಯೇ ಇದೀಗ ಮಸೀದಿಯ ಧ್ವನಿ ವರ್ಧಕಗಳನ್ನು ತೆರವುಗೊಳಿಸಬೇಕು ಎಂದು ಬಿಜೆಪಿ ಪರ ಸಂಘಟನೆಗಳು ಆಗ್ರಹಿಸಿದ್ದು, ರಾಜ್ಯದಲ್ಲಿ ಮತ್ತೊಂದು ವಿವಾದ ಇದೀಗ ಪರ ವಿರೋಧ ಚರ್ಚೆಗೆ ಕಾರಣವಾಗಿದೆ.
ಈ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್.ಈಶ್ವರಪ್ಪ, ಮಸೀದಿಯಲ್ಲಿ ಧ್ವನಿ ವರ್ಧಕ ಬಳಸುವ ವೇಳೆ ನಾವು ಹನುಮಾನ್ ಚಾಲೀಸ್ ನ್ನು ಧ್ವನಿವರ್ಧಕದಲ್ಲಿ ಜೋರಾಗಿ ಹಾಕುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಇದು ಸ್ಪರ್ಧೆ ಅಲ್ಲ, ಈ ರೀತಿ ಮಾಡುವುದರಿಂದ ಧರ್ಮಗಳ ನಡುವೆ ಸಂಘರ್ಷವಾಗಬಹುದು ಎಂದು ಅಭಿಪ್ರಾಯ ಪಟ್ಟರು.
ಇದರ ಬಗ್ಗೆ ಮುಸ್ಲಿಮ್ ಮುಖಂಡರೇ ಚಿಂತಿಸಬೇಕು. ದೇವಸ್ಥಾನಗಳಲ್ಲಿ, ಚರ್ಚ್ ಗಳಲ್ಲಿ ನಡೆಯುವ ರೀತಿಯಲ್ಲಿ ಬೇರೆಯವರಿಗೆ ತೊಂದರೆಯಾಗದಂತೆ ಮಸೀದಿಯೊಳಗೆ ಧ್ವನಿ ವರ್ಧಕ ಬಳಸುವುದ ಸೂಕ್ತ ಎಂದು ಈಶ್ವರಪ್ಪ ಸಲಹೆ ನೀಡಿದ್ದಾರೆ.
ಇಲ್ಲಿಯವರೆಗೆ ಇಲ್ಲದ ವಿರೋಧ ಈಗ್ಯಾಕೆ?
ಮಸೀದಿಗಳ ಧ್ವನಿ ವರ್ಧಕಗಳ ಬಗ್ಗೆ ಈವರೆಗೆ ಇಲ್ಲದ ವಿವಾದ ಈಗ ಯಾಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಧ್ವನಿವರ್ಧಕ ವಿವಾದದ ಕುರಿತು ಪ್ರಶ್ನಿಸಿದ್ದು, ಇದು ಕರ್ನಾಟಕ, ಉತ್ತರ ಪ್ರದೇಶವಲ್ಲ, ಬಿಜೆಪಿಯವರು ಕಾಂಗ್ರೆಸ್ ಮುಕ್ತ ಎನ್ನುತ್ತಿದ್ದರು. ಬಿಜೆಪಿ ಇದೇ ರೀತಿಯಲ್ಲಿ ಮುಂದುವರಿದರೆ, ಬಿಜೆಪಿ ಮುಕ್ತವಾಗಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗೋರಾಖ್ ನಾಥ್ ಮಠಕ್ಕೆ ನುಗ್ಗಿ ಮಚ್ಚಿನಿಂದ ದಾಳಿ ನಡೆಸಿದ ಮಾನಸಿಕ ಅಸ್ವಸ್ಥ
ಮುಂದಿನ ಮಹಾಮಾರಿ ಕೀಟಗಳಿಂದ; ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ
ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ ತಮಿಳುನಾಡು ಸರ್ಕಾರ
ಬನ್ನಂಜೆ ರಾಜ ಸಹಿತ 8 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋಕಾ ನ್ಯಾಯಾಲಯ
ಬೆಳ್ತಂಗಡಿ: ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿ ಮನೆ ಸಹಿತ ಹಲವರ ಮನೆಯ ಕುಡಿಯುವ ನೀರಿನ ಸಂಪರ್ಕ ಕಡಿತ