ಮಸೀದಿಗಳ ಎದುರು ಸೌಂಡ್ ಬಾಕ್ಸ್ ಹಾಕಿ ಹನುಮಾನ್ ಚಾಲೀಸ್ ಹಾಕ್ತೇವೆ: ಬಿಜೆಪಿ ಸರ್ಕಾರಕ್ಕೆ ಸಿದ್ಧಲಿಂಗ ಸ್ವಾಮೀಜಿ ಸವಾಲು

ಕಲಬುರಗಿ: ಹೈಕೋರ್ಟ್, ಸುಪ್ರೀಂಕೋರ್ಟ್ ಆದೇಶವಿದ್ದರೂ ಆಜಾನ್ ಹಾಗೂ ಧ್ವನಿವರ್ಧಕದ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತಿಲ್ಲ. ಇದೇ 9ರ ಒಳಗೆ ಸರ್ಕಾರ ಧ್ವನಿವರ್ಧಕದ ವಿರುದ್ದ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮಂದಿರಗಳಲ್ಲಿ ಹಾಗೂ ಮಸೀದಿಗಳ ಎದುರು ಸೌಂಡ್ ಬಾಕ್ಸ್ಗಳ ಮೂಲಕ ಹನುಮಾನ್ ಚಾಲೀಸ್ ಅಭಿಯಾನ ಆರಂಭಿಸುತ್ತೇವೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಮಸೀದಿಗಳ ಮೇಲೆ ಸ್ಪೀಕರ್ ಗಳನ್ನು ಅಕ್ರಮವಾಗಿ ಬಳಕೆ ಮಾಡ್ತಿದ್ದಾರೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುತ್ತಿಲ್ಲ. ಮಸೀದಿಗಳ ಮೇಲಿನ ಧ್ವನಿವರ್ಧಕದ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರ ಮೀನಾಮೇಷ ಏಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಕೂಡ ಮಂದಿರಗಳಲ್ಲಿ ಹಾಗೂ ಮಸೀದಿಗಳ ಎದುರು ದೊಡ್ಡ-ದೊಡ್ಡ ಸೌಂಡ್ ಬಾಕ್ಸ್ಗಳ ಮೂಲಕ ಹನುಮಾನ್ ಚಾಲೀಸ್ ಅಭಿಯಾನ ಆರಂಭಿಸುತ್ತೇವೆ. ಏನಾದ್ರೂ ಅನಾಹುತವಾದರೆ ಸರ್ಕಾರವೇ ಇದಕ್ಕೆ ನೇರ ಹೊಣೆ ಎಂದು ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರಶಾಂತ್ ನೀಲ್ ಭಾರತೀಯ ಸಿನಿಮಾ ರಂಗದ ವೀರಪ್ಪನ್: ರಾಮ್ ಗೋಪಾಲ್ ವರ್ಮಾ
ಮತ್ತೊಮ್ಮೆ ಪ್ರಶಸ್ತಿ ಪಡೆದ “ಜೈ ಭೀಮ್” ಚಿತ್ರ: ಒಂದೇ ಸಮಾರಂಭದಲ್ಲಿ 2 ಪ್ರಶಸ್ತಿ!
ಇಂದಿಗೆ ಹೆಚ್ಚು ಪ್ರಸ್ತುತವಾಗಿರುವ ಮಹಾರ್ ಸಮುದಾಯವನ್ನುದ್ದೇಶಿಸಿ ಅಂಬೇಡ್ಕರರು ಹೇಳಿದ ಆ ಮಾತುಗಳು!
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಎಸೆಸೆಲ್ಸಿ ವಿದ್ಯಾರ್ಥಿನಿ!
ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ನೀಡಿದ ಕಟ್ಟುನಿಟ್ಟಿನ ಸೂಚನೆ ಏನು?