ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ: 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
ಪೇಶಾವರ್: ನಮಾಜ್ ವೇಳೆ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಸುಮಾರು 30 ಜನರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ಶುಕ್ರವಾರದ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಲೇಡಿ ರೀಡಿಂಗ್‌ನ ಮಾಧ್ಯಮ ವ್ಯವಸ್ಥಾಪಕ ಅಸಿಮ್ ಖಾನ್ ಹಾಗೂ ಡಾನ್ ವರದಿಗಳ ಪ್ರಕಾರ, ಇದುವರೆಗೆ 30 ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದೆ.
ಗಾಯಗೊಂಡಿರುವ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಹೊಣೆಯನ್ನು ತಕ್ಷಣ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ರೈತರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬೊಮ್ಮಾಯಿ
ಮತ್ತೆ ಅಧಿಕಾರದತ್ತ ಬಿಎಸ್‌ಪಿ: ಬಿಎಸ್‌ಪಿ ವರಿಷ್ಠೆ ಮಾಯಾವತಿ ವಿಶ್ವಾಸ
ಆಯತಪ್ಪಿ ಐದನೆ ಮಹಡಿಯಿಂದ ಕೆಳಗೆ ಬಿದ್ದು ಅಸಿಸ್ಟೆಂಟ್ ಪ್ರೊಫೆಸರ್ ಗಂಭೀರ