ಮೋದಿ ಹೇಳಿದ್ದಕ್ಕೆ ನಾನು ಮಾಸ್ಕ್ ಧರಿಸಿಲ್ಲ: ಉಮೇಶ್ ಕತ್ತಿ - Mahanayaka
7:17 AM Thursday 12 - December 2024

ಮೋದಿ ಹೇಳಿದ್ದಕ್ಕೆ ನಾನು ಮಾಸ್ಕ್ ಧರಿಸಿಲ್ಲ: ಉಮೇಶ್ ಕತ್ತಿ

umesh katti
18/01/2022

ಅಥಣಿ: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಅಥವಾ ಬಿಡುವುದು ಅವರವರ ವೈಯಕ್ತಿಕ ವಿಚಾರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅದಕ್ಕಾಗಿ ನಾನು ಮಾಸ್ಕ್​ ಧರಿಸಿಲ್ಲ ಎಂದು ಆಹಾರ ಇಲಾಖೆ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.

ಅಥಣಿ ಪಟ್ಟಣದಲ್ಲಿ ಲಕ್ಷ್ಮಿ ಸಸ್ಯೋದ್ಯಾನ ಉದ್ಘಾಟನೆ ನೆರವೇರಿಸಿ ಬಳಿಕ ಅವರು ಮಾಧ್ಯಮ ಜೊತೆ ಮಾತನಾಡಿ, ಕೇಂದ್ರ ಸರ್ಕಾರ ಕೊರೊನಾ ನಿಯಮಗಳಲ್ಲಿ ಕೆಲವನ್ನು ಸಡಿಲಿಕೆ ಮಾಡಲಾಗಿದೆ. ಕಳೆದ ಎರಡು ದಿನದ ಹಿಂದೆ ದೇಶದ ಪ್ರಧಾನಿ ನರೇಂದ್ರ ಮೋದಿ ಮಾಸ್ಕ್ ಧರಿಸುವುದು – ಬಿಡುವುದು ಅವರವರ ಭಾವಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಅದಕ್ಕೆ ನಾನು ಮಾಸ್ಕ್ ಧರಿಸುತಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿಯಾದ ತಕ್ಷಣ ನಿಮಗೆ ಹೇಳುತ್ತೇನೆ. ಇಷ್ಟರಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಕೆಲವರು ಸಂಕ್ರಾಂತಿ ನಂತರ ಹಾಗೂ ಜನವರಿ 24 ನಂತರ ಬದಲಾವಣೆಯಾಗುತ್ತದೆ ಎಂದು ಹೇಳುತ್ತಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಇನ್ನು ಸಚಿವ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಖಾಲಿ ಇರುವ ಸ್ಥಾನಗಳನ್ನು ತುಂಬುವುದು ಬಿಡುವುದು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಿಕ್ಷಕಿಗೆ ಅವಹೇಳನಾಕಾರಿ ಗಿಫ್ಟ್ ನೀಡಿದ ಮನೆ ಮಾಲಿಕ: ಆರೋಪಿ ವಿರುದ್ಧ ಎಫ್ ಐಆರ್

ಖ್ಯಾತ ಸಮಾಜ ಸೇವಕಿ, ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ವಿಧಿವಶ

ಖ್ಯಾತ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಹೃದಯಾಘಾತದಿಂದ ನಿಧನ

ಪತಿ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ಮಹಿಳೆ

ಆರೋಗ್ಯದ ಜೊತೆಗೆ ಚರ್ಮದ ಕಾಂತಿಗೆ ಬೀಟ್ರೂಟ್ ಸೇವನೆ ಉತ್ತಮ

 

ಇತ್ತೀಚಿನ ಸುದ್ದಿ