ಫಾಝಿಲ್, ಮಸೂದ್ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ತಾರತಮ್ಯದ ವಿರುದ್ಧ ಬೃಹತ್ ಪ್ರತಿಭಟನೆ
ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎಸಗಿರುವ ತಾರತಮ್ಯವನ್ನು ಖಂಡಿಸಿ ಮತ್ತು ಸೂಕ್ತ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಸುರತ್ಕಲ್ ವ್ಯಾಪ್ತಿಯ 27 ಜಮಾತ್ ನ ಮುಸ್ಲಿಂ ಐಕ್ಯತಾ ವೇದಿಕೆ ಈ ಪ್ರತಿಭಟನೆಯ ನೇತೃತ್ವ ವಹಿಸಿತ್ತು. ಈ ಪ್ರತಿಭಟನಾ ವೇದಿಕೆಯಲ್ಲಿ ಎಸ್ ಬಿ ದಾರಿಮಿ, ಮುಹಮ್ಮದ್ ಕುಂಞ, ಎಕೆ ಅಶ್ರಫ್, ಮೃತ ಫಾಝಿಲ್ ತಂದೆ ಸೇರಿದಂತೆ ಅನೇಕರು ಉಪಸ್ಥಿತರಿದ್ದು ಮಾತನಾಡಿದರು.
ಫಾಝಿಲ್, ಮಸೂದ್ ಕೊಲೆ ಕೇಸನ್ನು ಎನ್ ಐಎಗೆ ಕೊಡಬೇಕು ಹಾಗೂ ಸರ್ಕಾರ ಪರಿಹಾರ ಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ 5 ಸಾವಿರಕ್ಕಿಂತಲೂ ಅಧಿಕ ಮಂದಿ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka