ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಬುಡಕಟ್ಟು ಮಹಿಳೆಯ ಶಿರಚ್ಛೇದನ! - Mahanayaka
6:31 AM Wednesday 25 - December 2024

ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಬುಡಕಟ್ಟು ಮಹಿಳೆಯ ಶಿರಚ್ಛೇದನ!

black magic
25/07/2021

ಒಡಿಶಾ: ಮಾಟಮಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯದ ಮಹಿಳೆಯ ಶಿರಚ್ಛೇದನ ಮಾಡಿ ಹತ್ಯೆ ಮಾಡಿದ ದಾರುಣ ಘಟನೆ ಒಡಿಶಾದ ಮಯೂರಗಂಜ್ ಜಿಲ್ಲೆಯ ಬಂಗ್ರಿಪೋಶಿ ಠಾಣಾ ವ್ಯಾಪ್ತಿಯ ಪುರುನಪಾಣಿ ಎಂಬ ಗ್ರಾಮದಲ್ಲಿ ನಡೆದಿದೆ.

55 ವರ್ಷದ ಕುನಿ ಜೆರಾಯ್ ಮೃತಪಟ್ಟ ಮಹಿಳೆಯಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯ ಕಳೇಬರವನ್ನು ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

33 ವರ್ಷ ವಯಸ್ಸಿನ ಜಮೀರಾ ಸಿಂಗ್  ಮಹಿಳೆಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದು, ಕುನಿ ಜೆರಾಯ್ ಮಾಟ ಮಾಡಿ ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಿ ಜುಲೈ 9ರಂದು ಕೊಡಲಿಯಿಂದ ಜೆರಾಯ್ ಯ ಶಿರಚ್ಛೇದನ ಮಾಡಿ ಹತ್ಯೆ ಮಾಡಿದ್ದ.

ಜೆರಾಯ್ ನಾಪತ್ತೆಯಾಗಿದ್ದರಿಂದ ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನನ್ವಯ ತನಿಖೆ ನಡೆಸಿದ ಪೊಲೀಸರಿಗೆ ಜಮೀರಾ ಸಿಂಗ್ ನ ಕೃತ್ಯ ತಿಳಿದು ಬಂದಿದ್ದು, ಆತನನ್ನು ತಕ್ಷಣವೇ ಬಂಧಿಸಿ, ತಮ್ಮ ಶೈಲಿಯಲ್ಲಿ ವಿಚಾರಣೆಗೊಳಪಡಿಸಿದಾಗ ಆತ ಸತ್ಯ ಬಾಯ್ಬಿಟ್ಟಿದ್ದಾನೆ.

ಇನ್ನೂ ಆರೋಪಿಯನ್ನು  ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನೂ ಕೃತ್ಯಕ್ಕೆ ಬಳಸಿದ ಕೊಡಲಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳು…

ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ!

ಯುವಕನ ಲಾಕಪ್ ಡೆತ್ ವಿರೋಧಿಸಿ ಪೊಲೀಸ್ ಠಾಣೆಗೆ ನುಗ್ಗಿದ ಗ್ರಾಮಸ್ಥರು | ಮಹಿಳಾ ಪೇದೆ ಸ್ಥಳದಲ್ಲಿಯೇ ಸಾವು

ಬೆಚ್ಚಿ ಬೀಳಿಸಿದ ಘಟನೆ: ಬಹಿರ್ದೆಸೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ!

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಮನೆಯ 9 ಮಂದಿ ದುರಂತ ಸಾವು!

“BSP ಗೆದ್ದು ಬಂದ ನೆಲದಲ್ಲಿ ರಾಮಮಂದಿರ ನಿರ್ಮಾಣವಾಗುತ್ತದೆ” | ಬಿಎಸ್ ಪಿಯಿಂದ ಅಚ್ಚರಿಯ ಹೇಳಿಕೆ

ಇತ್ತೀಚಿನ ಸುದ್ದಿ