ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರು | ಲಖನ್ ಜಾರಕಿಹೊಳಿ
ಬೆಳಗಾವಿ: ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರಿಂದ ಮಹಾಂತೇಶ ಕವಟಗಿಮಠಗೆ ಸೋಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಚಿಕ್ಕೋಡಿಯ ಆರಡಿ ಕಾಲೇಜಿನ ಮತಗಟ್ಟೆ ಎಣಿಕೆ ಕೇಂದ್ರದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 5 ಮತ್ತು 6 ತಾರೀಖಿನಂದು ಡಿ.ಕೆ.ಶಿವಕುಮಾರ್ ಜೊತೆಗೆ ಬಿಜೆಪಿ ನಾಯಕರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಜಾರಕಿಹೊಳಿ ಸಹೋದರರಿಗೆ ಕೆಟ್ಟ ಹೆಸರು ತರಲು ಹೀಗೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿದ್ದರಿಂದಲೇ ಬಿಜೆಪಿಗೆ ಸೋಲಾಗಿದೆ. ಒಂದು ವೇಳೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳದಿದ್ದರೆ, ನಾನೂ ಗೆಲ್ಲುತ್ತಿದ್ದೆ. ಬಿಜೆಪಿಯೂ ಗೆಲ್ಲುತ್ತಿತ್ತು ಎಂದು ಲಖನ್ ಜಾರಕಿಹೊಳಿ ಹೇಳಿದ್ದು, ಬಿಜೆಪಿ ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದರ ವಿರುದ್ಧ ಅವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ವ್ಯಕ್ತಿಯ ಪಾರ್ಥಿವ ಶರೀರ ಸಾಗಿಸಲು ದಾರಿ ಮಾಡಿಕೊಟ್ಟ ಹನುಮ ಮಾಲಾಧಾರಿಗಳು!
ಕಾನದ-ಕಟದರ ಜನನ: ತುಳುನಾಡಿನ ಅವಳಿ ವೀರರು-ಕಾನದ ಕಟದರು | ಸಂಚಿಕೆ: 10
ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣಿನ ಜೊತೆಗೆ ಶೇಂಗಾ ಮಿಠಾಯಿ ನೀಡಲು ನಿರ್ಧಾರ!
ವಿಧಾನ ಪರಿಷತ್ ಫಲಿತಾಂಶ: ಕಾಂಗ್ರೆಸ್ ಗೆಲುವು ಸಾಧಿಸಿದ ಕ್ಷೇತ್ರಗಳು
ವಿಧಾನ ಪರಿಷತ್ ಚುನಾವಣಾ ಫಲಿತಾಂಶ: ಬಿಜೆಪಿ ಗೆಲುವು ಸಾಧಿಸಿದ ಕ್ಷೇತ್ರಗಳು
ವಿಧಾನ ಪರಿಷತ್ ದ್ವಿಸದಸ್ಯತ್ವ ಚುನಾವಣೆ: ಗೆಲುವು ಸಾಧಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಮಂಜುನಾಥ್ ಭಂಡಾರಿ
ಡಾನ್ಸ್ ಬಾರ್ ನ ರಹಸ್ಯ ಕೋಣೆಯಲ್ಲಿ ಬಚ್ಚಿಡಲಾಗಿದ್ದ 17 ಯುವತಿಯರ ರಕ್ಷಣೆ!