'ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿಲ್ಲ: ಡಾ.ಶ್ರೀನಿವಾಸ್ ಸ್ಪಷ್ಟನೆ - Mahanayaka
11:03 PM Wednesday 10 - September 2025

‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿಲ್ಲ: ಡಾ.ಶ್ರೀನಿವಾಸ್ ಸ್ಪಷ್ಟನೆ

dr shrinivas
05/10/2021

ಬೆಂಗಳೂರು: ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟ ಎಂಬ ಸಂಘಟನೆ ಹಮ್ಮಿಕೊಂಡಿದ್ದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಅಂಬೇಡ್ಕರ್ ವಿಚಾರಧಾರೆಗಳ ಹಿನ್ನೆಲೆಯ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಡಾ.ಶ್ರೀನಿವಾಸ್ ಅವರ ಫೋಟೋವನ್ನು ಹಾಕಲಾಗಿದ್ದು, ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


Provided by

ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿರುವ ಬೆನ್ನಲ್ಲೇ, ಫೇಸ್ ಬುಕ್ ಲೈವ್ ನಲ್ಲಿ ಡಾ.ಶ್ರೀನಿವಾಸ್ ಅವರು ಸ್ಪಷ್ಟನೆ ನೀಡಿದ್ದು, ಮತಾಂತರ ನಿಷೇಧ ಕಾಯ್ದೆಯ ವಿಚಾರದಲ್ಲಿ ಚರ್ಚೆ ಇದೆ ಎಂದು ನನ್ನನ್ನು ಆಹ್ವಾನಿಸಲಾಗಿತ್ತು. ಆದರೆ, ಅದು ಪ್ರತಿಭಟನೆ ಎಂದು ನನಗೆ ಆ ಬಳಿಕ ತಿಳಿಯಿತು. ಹಾಗಾಗಿ ನಾನು ಆ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಮೌರ್ಯ ಸರ್ಕಲ್ ನಲ್ಲಿ ಶನಿವಾರ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಅತುಲ್ ಕುಮಾರ್, ಪುನೀತ್ ಕೆರೆಹಳ್ಳಿ ಮೊದಲಾದವರ ಚಿತ್ರಗಳೊಂದಿಗೆ ಡಾ.ಶ್ರೀನಿವಾಸ್ ಅವರ ಫೋಟೋ ಕೂಡ ಬಳಸಿಕೊಳ್ಳಲಾಗಿತ್ತು. ಈ ಚಿತ್ರ ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಂಬೇಡ್ಕರ್ ವಾದದ ಬಗ್ಗೆ ಮಾತನಾಡುತ್ತಿದ್ದ ನಾಯಕರು ಸಮಾಜವನ್ನು ಒಡೆಯುವ ಇಂತಹ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆಯೇ? ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಶಾಕಿಂಗ್ ನ್ಯೂಸ್: ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ!

ಮಹಿಳೆಗೆ ಪೆಟ್ರೋಲ್ ಸುರಿದು ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ | “ಪಾಳೆಗಾರಿಕೆ ಮನಸ್ಥಿತಿಯ ಕ್ರಿಮಿಗಳಿಗೆ  ಕಠಿಣ ಶಿಕ್ಷೆಯಾಗಲಿ”

ರೈಲಿನಲ್ಲಿ ಅಪ್ರಾಪ್ತೆಗೆ ಮೇಲೆ ಲೈಂಗಿಕ ಕಿರುಕುಳ ನಡೆಸಿದವನಿಗೆ 5 ವರ್ಷ ಜೈಲು ಶಿಕ್ಷೆ

75 ಯುವತಿಯರನ್ನು ಮದುವೆಯಾಗಿ, 200 ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡಿದ ಪಾಪಿ ಅರೆಸ್ಟ್!

ಆರ್ಯನ್ ಖಾನ್ ಜೊತೆಗೆ ರೇವ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಮಾಡೆಲ್ ಯಾರು ಗೊತ್ತಾ?

ನಿನ್ನೆ ವಿಶ್ವಾದ್ಯಂತ ಫೇಸ್ ಬುಕ್, ವಾಟ್ಸಾಪ್ ಗೆ ಏನಾಗಿತ್ತು?

ಪ್ರವಾದಿಯ ಅವಹೇಳನಾಕಾರಿ ವ್ಯಂಗ್ಯ ಚಿತ್ರ ಬಿಡಿಸಿದ್ದ ವಿವಾದಿತ ಕಲಾವಿದ ಅಪಘಾತದಲ್ಲಿ ಸಾವು!

ಇತ್ತೀಚಿನ ಸುದ್ದಿ