ಮತ್ತೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ. ಏರಿಕೆ
ಬೆಂಗಳೂರು: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 50 ರೂ. ಏರಿಕೆಯಾಗಿದೆ. ಅದರಂತೆ 14.2 ಕೆಜಿಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂಪಾಯಿಯಾಗಿದ್ದು, ಇಂದಿನಿಂದಲೇ ಅನ್ವಯವಾಗುವಂತೆ ದರ ಹೆಚ್ಚಳ ಮಾಡಲಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಷ್ಯಾ ಉಕ್ರೇನ್ ಯುದ್ಧ ಈಗ ಜನರ ಮೇಲೆ ನೇರ ಪರಿಣಾಮ ಬೀರಿದೆ. ಕಚ್ಚಾತೈಲ ಬೆಲೆ ಏರಿಕೆಯಾಗಿದ್ದು, ಇದರ ಪರಿಣಾಮ ಭಾರತದಲ್ಲೂ ಕಂಡುಬಂದಿದೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 926 ರೂ. ನಿಂದ 976 ರೂ.ಗೆ ಏರಿಕೆಯಾಗಿದೆ. ಲಕ್ನೋದಲ್ಲಿ ಈಗ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ 987.5 ರೂ.ಗೆ ಲಭ್ಯವಿದ್ದರೆ, ಪಾಟ್ನಾದಲ್ಲಿ 998 ರೂ.ನಿಂದ 1039.5 ರೂ.ಗೆ ಏರಿಕೆಯಾಗಿದೆ.
ತೈಲ ಕಂಪೆನಿಗಳು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದ್ದಲ್ಲದೆ, 5 ಕೆ.ಜಿ. ಮತ್ತು 10 ಕೆ.ಜಿ. ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. 5 ಕೆ.ಜಿ. ಸಿಲಿಂಡರ್ ಬೆಲೆ 349 ರೂ. ಆಗಿದ್ದರೆ, 10 ಕೆ.ಜಿ.ಯ ಸಿಲಿಂಡರ್ ಬೆಲೆ 669 ರೂ. ಆಗಿದೆ. 19 ಕೆ.ಜಿ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 2003.50 ರಷ್ಟಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಗ್ ಶಾಕ್: ಭಾರೀ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪ: ವಿಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
ಎಸಿಬಿ ಶಾಕ್: ಬೆಳ್ಳಂಬೆಳಗ್ಗೆ ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ದಾಳಿ
ಉಕ್ರೇನ್ ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ