ಮತ್ತೆ ಕಂಪಿಸಿದ ಭೂಮಿ; ಭಯಭೀತರಾದ ಜನತೆ
ಚಿಕ್ಕಬಳ್ಳಾಪುರ: ತಾಲೂಕಿನ ಶೆಟ್ಟಿಗೆರೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ಇಂದು ಬೆಳಗ್ಗೆ ಭಾರಿ ಸದ್ದಿನೊಂದಿಗೆ ಹಲವು ಬಾರಿ ಭೂಮಿ ಕಂಪಿಸಿದ್ದು, ಜನ ಭಯಭೀತರಾಗಿದ್ದಾರೆ.
ಭೂ ಕಂಪಿಸಿದ ಪರಿಣಾಮ ಗ್ರಾಮಸ್ಥರು ಮನೆಗಳನ್ನು ತೊರೆದು ಬಯಲು ಪ್ರದೇಶದಲ್ಲಿ ಕಾಲ ಕಳೆಯುವಂತಾಗಿದೆ. ಸದ್ಯ ಇದೇ ಪ್ರದೇಶದಲ್ಲಿ ಕಳೆದ ಡಿಸೆಂಬರ್ ಹಾಗೂ ಜನವರಿ ಮೊದಲ ವಾರದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿತ್ತು. ಪದೇ ಪದೇ ಭೂಮಿ ಕಂಪಿಸುತ್ತಿರೋದಕ್ಕೆ ಆತಂಕಗೊಂಡ ಜನ ಮನೆಗಳನ್ನು ತೊರೆದು ದೂರದ ಸ್ಥಳಗಳಿಗೆ ತೆರಳುತ್ತಿದ್ದಾರೆ.
ಇನ್ನೂ ಈಗಾಗಲೇ ಹಲವು ಬಾರಿ ಭೂವಿಜ್ಞಾನಿಗಳ ತಂಡ ಹಾಗೂ ಸಚಿವ ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ತಿಂಗಳ ಹಿಂದೆ ಅಧಿಕ ಮಳೆಯಿಂದ ಭೂಮಿಯಲ್ಲಿ ಸೃಷ್ಟಿಯಾಗಿರುವ ಶಬ್ದದಿಂದ ಭೂಮಿ ಕಂಪಿಸುತ್ತಿದೆ ಎಂದು ಹೇಳಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿದ್ಯುತ್ ದರ ಹೆಚ್ಚಳ ಮಾಡುವುದು ಅನಿವಾರ್ಯ: ಸಚಿವ ವಿ.ಸುನಿಲ್ ಕುಮಾರ್
ಕೊರಗಜ್ಜನ ವೇಷ ಹಾಕಿ ಅಪಹಾಸ್ಯ; ಮತ್ತೆ ಪ್ರಕರಣ ದಾಖಲು
ಎರಡನೇ ಏಕದಿನ ಪಂದ್ಯ: ಭಾರತಕ್ಕೆ ಸೋಲು
ಜ. 23ರಂದು ಸಂಪೂರ್ಣ ಲಾಕ್ ಡೌನ್ ; ಸಿಎಂ ಸ್ಟಾಲಿನ್
ತಾಯಿ, ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರಿಂದ ಆರೋಪ