10:37 PM Wednesday 12 - March 2025

ಮತ್ತೆ ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ 80 ಪೈಸೆ ಏರಿಕೆ

petrol diesel price drop
31/03/2022

ನವದೆಹಲಿ: ಇಂದು ಕೂಡ ಪೆಟ್ರೋಲ್‌ ಮತ್ತು ಡೀಸೆಲ್‌ ಲೀಟರ್‌ಗೆ ತಲಾ 80 ಪೈಸೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್‌ ತೈಲ ಬೆಲೆಯಲ್ಲಿ 6.40 ರೂಪಾಯಿ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 90.50 ರೂ. ಇದ್ದ ಡೀಸೆಲ್ ದರ ರೂ. 91.29ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 101.81 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.93.07 ದಾಖಲಾಗಿದೆ. ಮುಂಬೈನಲ್ಲಿ ಲೀಟರ್‌ ಪೆಟ್ರೋಲ್‍ಗೆ 84 ಪೈಸೆ ಏರಿಕೆಯಾಗಿದ್ದು, ಈ ಮೂಲಕ ಲೀ. ಪೆಟ್ರೋಲ್ ದರ ರೂ. 116.72, ಡೀಸೆಲ್ ರೂ.100.94 ದಾಖಲಾಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 107.45 ರೂ. ಹಾಗೂ ಲೀಟರ್ ಡೀಸೆಲ್ ದರ 97.52 ರೂ. ಇದೆ. ಕೋಲ್ಕತ್ತಾದಲ್ಲಿ ಲೀಟರ್‌ಗೆ ಪೆಟ್ರೋಲ್ ಬೆಲೆ 111.35ರೂ. ಹಾಗೂ ಡೀಸೆಲ್‍ಗೆ 96.22ರೂ. ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಾರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಚಾಲಕ

ಹಲಾಲ್ ಮಾಂಸ ವಿವಾದ: ಪ್ರಚೋದನಾಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ | ಅರಗ ಜ್ಞಾನೇಂದ್ರ

ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಮುಸ್ಲಿಂ ಯುವಕನ ಹತ್ಯೆ; ನಾಲ್ವರ ಬಂಧನ

ದೇವರ ವಿಗ್ರಹ ಕೆತ್ತುವ ಮುಸ್ಲಿಮರಿಗೂ ಬಹಿಷ್ಕಾರ ಹಾಕುತ್ತೀರಾ? | ಕುಮಾರಸ್ವಾಮಿ ಪ್ರಶ್ನೆ

ಇತ್ತೀಚಿನ ಸುದ್ದಿ

Exit mobile version