ಮತ್ತೋರ್ವ ಬಿಜೆಪಿ ಶಾಸಕ ರಾಜೀನಾಮೆ; ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
ಲಕ್ನೋ: ಉತ್ತರ ಪ್ರದೇಶದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು, ಇಂದು ಮತ್ತೋರ್ವ ಬಿಜೆಪಿ ಶಾಸಕ ಪಕ್ಷಕ್ಕೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆಗ್ರಾ ದ ಫತೇಹಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ವರ್ಮಾ ಪಕ್ಷಕ್ಕೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ.
ಮೊದಲ ಹಂತದ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ವರ್ಮಾ ಹೆಸರು ಇರಲಿಲ್ಲ. ಅವರ ಸ್ಥಾನಕ್ಕೆ ಛೋಟೇಲಾಲ್ ವರ್ಮಾರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಆಕ್ರೋಶಗೊಂಡ ಜಿತೇಂದ್ರ ವರ್ಮಾ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಅವರಿಗೆ ಕಳುಹಿಸಿರುವ ಎರಡು ಸಾಲಿನ ರಾಜೀನಾಮೆ ಪತ್ರದಲ್ಲಿ ವರ್ಮಾ, ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅದನ್ನು ಸ್ವೀಕರಿಸಿ ಎಂದು ಬರೆದಿದ್ದಾರೆ.
ರಾಜೀನಾಮೆ ಬಳಿಕ ಮಾತನಾಡಿದ ಅವರು, ನಾನು ಬಿಜೆಪಿ ತೊರೆದಿದ್ದಕ್ಕೆ ಹಲವು ಕಾರಣಗಳಿವೆ, ಟಿಕೆಟ್ ನಿರಾಕರಿಸಿ 15 ದಿನಗಳಾದರೂ ಪಕ್ಷದ ನಾಯಕತ್ವ ನನ್ನೊಂದಿಗೆ ಮಾತನಾಡಿಲ್ಲ, ಹೀಗಾಗಿ ಇದರಿಂದ ನೊಂದು ನಾನು ಸಮಾಜವಾದಿ ಪಕ್ಷಕ್ಕೆ ಸೇರಿದ್ದೇನೆ ಮತ್ತು ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.
ರೈತನಿಗೆ ರಸಗೊಬ್ಬರ ಕೊಡಲು ಸಾಧ್ಯವಾಗದೇ ಇದ್ದರೆ ನೀವು ಶಾಸಕರಾಗಿದ್ದು ಪ್ರಯೋಜನವೇನು.? ನಾನಷ್ಟೇ ಅಲ್ಲ ಬಿಜೆಪಿಯ ಹಲವು ಶಾಸಕರ ಪರಿಸ್ಥಿತಿ ಇದೆ.. ಹಲವಾರು ಶಾಸಕರು ಬಿಜೆಪಿ ತೊರೆಯಲಿದ್ದಾರೆ ಎಂದರು.
ಗುರಿ ತಪ್ಪಿದ ಗುಂಡು: 8 ವರ್ಷದ ಬಾಲಕಿ ಬಲಿ
ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ
ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಂಡ ಬಾಲಕ
ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ
ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನ