ಮಾತುಬಾರದ ಬಾಲಕನ ಹತ್ಯೆ: ಗೋಣಿ ಚೀಲದಲ್ಲಿ ತುಂಬಿ ಎಸೆದ ದುಷ್ಕರ್ಮಿಗಳು
ಮುಂಬೈ: ಮಾತುಬಾರದ 13 ವರ್ಷದ ಬಾಲಕನನ್ನು ಕೊಲೆಗೈದು ಗೋಣಿ ಚೀಲದೊಳಗೆ ತುಂಬಿ ಎಸೆದಿರುವ ಘಟನೆ ಪುಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಾಲಕನಿಗೆ ಮಾತು ಬರುತ್ತಿರಲಿಲ್ಲ. ಬಾಲಕನನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಎಸೆದಿದ್ದು, ಕೊತ್ರುದ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಇದೊಂದು ಕೊಲೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಕೊತ್ರುಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕನ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಆದರೆ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಕೊತ್ರುಡ್ ಠಾಣಾ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾಶ್ಮೀರ ಹತ್ಯಾಕಾಂಡ: ಮರು ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ
ಸಿಮೆಂಟ್ ಲಾರಿಗಳ ನಡುವೆ ಭೀಕರ ಅಪಘಾತ: ಚಾಲಕ ಸಜೀವ ದಹನ
ತಮಿಳುನಾಡಿನ 16 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಟೀಕಿಸಿದಕ್ಕಾಗಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ