ಕಾರಿನಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹ: ಇಬ್ಬರ ಬಂಧನ

08/08/2022
ಬ್ರಹ್ಮಾವರ: ತಾಲೂಕಿನ ಮಣೂರು ಗ್ರಾಮದ ರಾಜಲಕ್ಷೀ ಸಭಾಭವನದ ಬಳಿಯ ಸರ್ವಿಸ್ ರಸ್ತೆಯಲ್ಲಿ ಕಾರಿನಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಸ್ವಿಫ್ಟ್ ಕಾರು, 3,400 ರೂ. ನಗದು ಸಹಿತ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಗಿಳಿಯಾರು ನಿವಾಸಿಗಳಾದ 47 ವರ್ಷದ ಪ್ರವೀಣ ಹಾಗೂ 42 ವರ್ಷದ ರಾಘವೇಂದ್ರ ಎಂಬವರು ಮಟ್ಕಾ ಜುಗಾರಿಗಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪಿಗಳಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka