ಮತ್ತೆ 4 ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡಲು ಮುಂದಾದ ಕೇಂದ್ರ ಸರ್ಕಾರ
ನವದೆಹಲಿ: ಮೋದಿ ಸರ್ಕಾರ ಬಂದ ಮೇಲೆ ಸರ್ಕಾರಿ ಸ್ವಾಮ್ಯದ ಎಲ್ಲ ಸಂಸ್ಥೆಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ತೀವ್ರ ವಿರೋಧಗಳು ಬರುತ್ತಿರುವುದರ ನಡುವೆಯೇ ಇದೀಗ ಮೋದಿ ಸರ್ಕಾರ ಮತ್ತೆ 4 ಬ್ಯಾಂಕ್ ಗಳನ್ನು ಖಾಸಗಿಗೆ ಮಾರಾಟ ಅಥವಾ ಖಾಸಗೀಕರಣ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾವನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.
ಬ್ಯಾಂಕ್ ಆಫ್ ಇಂಡಿಯಾದಲ್ಲಿ 50 ಸಾವಿರ, ಸೆಂಟ್ರಲ್ ಬ್ಯಾಂಪ್ ಆಫ್ ಇಂಡಿಯಾದಲ್ಲಿ 33 ಸಾವಿರ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನಲ್ಲಿ 26 ಸಾವಿರ ಹಾಗೂ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 13 ಸಾವಿರ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಬ್ಯಾಂಕ್ ಗಳ ಮಾರಾಟದಿಂದ ಅಥವಾ ಖಾಸಗಿಕರಣದಿಂದ ಲಕ್ಷಾಂತರ ಉದ್ಯೋಗ ನಷ್ಟವಾಗುವ ಸಾಧ್ಯತೆಗಳು ಕಂಡು ಬಂದಿದೆ. ಇದು ಬಹಳಅಪಾಯಕಾರಿಯಾಗಿದೆ ಎಂದು ತಜ್ಞರು ಹೇಳಿದ್ದಾರೆ.