ಬಿಗ್ ನ್ಯೂಸ್: ಕೊರೊನಾ ನಿಯಂತ್ರಣಕ್ಕೆ ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್?
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದ ಸಭೆ ನಾಳೆಗೆ ಮುಂದೂಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಹಿರಿಯ ಅಧಿಕಾರಿಗಳ ಸಭೆ ನಡೆಯುಲಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ನಾಳೆ ಈ ಬಗ್ಗೆ ಸಭೆಯಲ್ಲಿ ಅಧಿಕೃತ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ನಾಳೆಯ ಸಭೆಯ ಬಳಿಕ ವಿಕೆಂಡ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಕೂಡ ಹೇಳಲಾಗುತ್ತಿದೆ. ಈಗಾಗಲೇ ಲಾಕ್ ಡೌನ್ ನಿಂದ ಸೊರಗಿ ಹೋಗಿರುವ ಜನರಿಗೆ ಮತ್ತೊಂದು ಸುತ್ತಿನ ಲಾಕ್ ಡೌನ್ ಭೀತಿ ಕೂಡ ಸೃಷ್ಟಿಯಾಗಿದೆ. ನಾಳೆಯ ಸಭೆಯ ಬಳಿಕ ಸರ್ಕಾರ ಮುಂದೆ ತೆಗೆದುಕೊಳ್ಳುವ ನಿರ್ಧಾರಗಳು ಅಧಿಕೃತವಾಗಿ ತಿಳಿದು ಬರಬಹುದು ಎಂದು ನಿರೀಕ್ಷಿಸಲಾಗಿದೆ.
ಇನ್ನಷ್ಟು ಸುದ್ದಿಗಳು…
ಮತಾಂತರದ ಆರೋಪ ಹೊರಿಸಿ ಮುಸ್ಲಿಮ್ ವ್ಯಕ್ತಿಯ ಮೇಲೆ ಬಜರಂಗದಳ ದಾಳಿ!
ವ್ಯಾಪಾರ ಮಾಡಲು ಬಂದ ಖಾಸಗಿ ಸಂಸ್ಥೆಗಳು ರಾಜಕೀಯ ನಿರ್ಧರಿಸುತ್ತಿವೆ | ಟ್ವಿಟ್ಟರ್ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ
ನಾಗರ ಪಂಚಮಿ: ಕೊವಿಡ್ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಕಡಿಮೆ
ಸಹೋದರನೇ ನನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾನೆ: ಪೊಲೀಸರ ಮೊರೆ ಹೋದ ಯುವತಿ