ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ? | ಸಚಿವ ಸುಧಾಕರ್ ನೀಡಿದ ಸುಳಿವು ಏನು?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಮಾದರಿಯ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ. ಮೇ 12ರವರೆಗೆ ಈ ನಿಯಮವನ್ನು ಪಾಲಿಸಲು ಸರ್ಕಾರ ಆದೇಶ ನೀಡಿದೆ. ಆದರೆ ಆ ಬಳಿಕ ಮತ್ತೆ ಲಾಕ್ ಡೌನ್ ಆಗುತ್ತದೆಯೇ ಎಂಬ ಬಗ್ಗೆ ಇದೀಗ ಅನುಮಾನ ಮೂಡಿದೆ.
ಈ ಬಗ್ಗೆ ಇಂದು ಮಾತನಾಡಿದ ಸಚಿವ ಸುಧಾಕರ್, ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಓಡಾಟ ರಾಜಾರೋಷವಾಗಿ ನಡೆಯುತ್ತಿದೆ. ಜನರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮೇ 12ಕ್ಕೆ ಈ ಕರ್ಫ್ಯೂ ಮುಗಿಯಲಿದೆ. ಆ ಬಳಿಕ ಸಿಎಂ ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸಿ ಕರ್ಫ್ಯೂ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇನ್ನೂ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಆದರೆ ಆರೋಗ್ಯ ಸಚಿವರು ಜನರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಬೆಡ್ ಬ್ಲಾಕಿಂಗ್ ದಂಧೆ, ಆಕ್ಸಿಜನ್ ಪೂರೈಕೆಯಲ್ಲಿ ಬೇಜವಾಬ್ದಾರಿತನ, ಕೊವಿಡ್ ನಿರ್ವಹಣೆಯಲ್ಲಿಯೂ ಭ್ರಷ್ಟಾಚಾರದಲ್ಲಿ ತೊಡಗಿರುವ ಆರೋಪವನ್ನು ಸರ್ಕಾರ ಎದುರಿಸುತ್ತಿದೆ. ಆದರೆ ಮಾಧ್ಯಮಗಳು ಹಾಗೂ ಸರ್ಕಾರ ಜನರು ಬೇಜವಾಬ್ದಾರಿತನದಲ್ಲಿ ವರ್ತಿಸುತ್ತಿರುವುದಕ್ಕೆ ಕೊರೊನಾ ಹೆಚ್ಚಾಗುತ್ತಿದೆ ಎಂದು ಹೇಳುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.