ಮತ್ತೊಂದು ಫ್ಲೈಓವರ್ ನಿರ್ಮಾಣ ಮಾಡುವ ಸಿಹಿ ಸುದ್ದಿ ನೀಡಿದ ನಳಿನ್ ಕುಮಾರ್ ಕಟೀಲ್
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿಯಲ್ಲಿ ನೂತನ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
34.8 ಕೋಟಿ ರೂ. ವೆಚ್ಚದಲ್ಲಿ ಈ ಫ್ಲೈಓವರ್ ನಿರ್ಮಾಣವಾಗಲಿದ್ದು, ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಟಿ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಇರುವ ಈ ಕಾಮಗಾರಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಅನುಮೋದನೆ ನೀಡಿದ್ದು, ಇದರಿಂದ ಬಹುಕಾಲದ ಬೇಡಿಕೆಯೊಂದು ಈಡೇರಿದಂತಾಗಿದೆ ಎಂದು ನಳೀನ್ ಕುಮಾರ್ ಕಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕೆಪಿಟಿಯಿಂದ ನಂತೂರುವರೆಗೆ ವಾಹನ ದಟ್ಟಣೆ ಸಾಮಾನ್ಯ ಎಂಬಂತಾಗಿದ್ದು, ಈ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಸಾರ್ವಜನಿಕರಿಗೆ ಹೇಳಲಾರದ ಕಿರಿಕಿರಿ ಉಂಟು ಮಾಡುತ್ತಿದೆ. ದಿನನಿತ್ಯ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಕೂಡ ಮನವಿ ಮಾಡಿಕೊಂಡು ಬಂದಿದ್ದರೂ ಈವರೆಗೆ ಯಾವುದೇ ಪರಿಹಾರ ಸಿಕ್ಕಿರಲಿಲ್ಲ. ಇದೀಗ ಸಂಸದ ನಳಿನ್ ಕುಮಾರ್ ಕಟೀನ್ ಅವರು ಸಾರ್ವಜನಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ರಾತ್ರೋ ರಾತ್ರಿ ಇಬ್ಬರು ಹುಡುಗರ ಖಾತೆಗೆ ಜಮಾ ಆಯಿತು 900 ಕೋಟಿಗೂ ಅಧಿಕ ಹಣ!
ಬೇಟೆ ಹುಡುಕುತ್ತಾ ಬಂದು ನಾಯಿಯ ಗೂಡಿನೊಳಗೆ ಬಂಧಿಯಾದ ಚಿರತೆ!
ಟ್ರಾಫಿಕ್ ಸಿಗ್ನಲ್ ನಲ್ಲಿ ಡಾನ್ಸ್ ಮಾಡಿ ಸಂಕಷ್ಟಕ್ಕೀಡಾದ ಯುವತಿ!
ಹೃದಯ ವಿದ್ರಾವಕ ಘಟನೆ: ಹುಟ್ಟುಹಬ್ಬದಂದೇ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಮಗು
ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನವನ್ನೂ ಕೆಡವಿದ್ದಾರೆ | ಯು.ಟಿ.ಖಾದರ್ ಆಕ್ರೋಶ
ಮಹಿಳೆ ಮೃತಪಟ್ಟು ನಾಲ್ಕು ತಿಂಗಳ ಬಳಿಕ ಕೊರೊನಾ ಲಸಿಕೆ ನೀಡಿದ ಆರೋಗ್ಯ ಕೇಂದ್ರ!
ಟೂತ್ ಪೇಸ್ಟ್ ಎಂದು ಭಾವಿಸಿ, ಇಲಿ ವಿಷದಲ್ಲಿ ಹಲ್ಲುಜ್ಜಿದ ಯುವತಿ ಸಾವು!