ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್ ನೀಡಿದ ಕೇಂದ್ರ ಸರ್ಕಾರ! - Mahanayaka

ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್ ನೀಡಿದ ಕೇಂದ್ರ ಸರ್ಕಾರ!

modi
07/11/2021

ನವದೆಹಲಿ: “ಕೊಟ್ಟಂತೆ ಮಾಡಿ, ಇನ್ನೊಂದು ಕಡೆಯಿಂದ ಕಿತ್ಕೊಳ್ಳೋದು ಅಂದ್ರೆ ಇದೇನಾ?” ಎನ್ನುವ ಪ್ರಶ್ನೆಗಳು ಇದೀಗ ಕೇಂದ್ರ ಸರ್ಕಾರ ನೀತಿಗಳಿಂದಾಗಿ ಹುಟ್ಟಿಕೊಂಡಿದೆ. ದೀಪಾವಳಿಗೆ ಭರ್ಜರಿ ಗಿಫ್ಟ್ ನೀಡಿದ್ದೇವೆ ಎಂದ ಬೆನ್ನಲ್ಲೇ, ಕೇಂದ್ರ ಸರ್ಕಾರ ದೇಶದ ಬಡ ಜನರಿಗೆ ಮತ್ತೊಂದು ಶಾಕ್ ನೀಡಿದೆ.

ಪ್ರಧಾನ ಮಂತ್ರ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ನೀಡಲಾಗುತ್ತಿದ್ದ ಉಚಿತ ಪಡಿತರ ವ್ಯವಸ್ಥೆ ನವೆಂಬರ್ ಬಳಿಕ  ಸ್ಥಗಿತಗೊಳ್ಳಲಿದ್ದು, ಪೆಟ್ರೋಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ಬಡವರಿಗೆ ನೀಡಲಾಗುತ್ತಿದ್ದ ಉಚಿತ ಅಕ್ಕಿಯನ್ನು ರದ್ದು ಮಾಡುವ ತೀರ್ಮಾನಕ್ಕೆ ಬಂದಿದೆ.

ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಬಡವರಿಗೆ ನೀಡಲಾಗುತ್ತಿದ್ದ ಯೋಜನೆಯನ್ನು ನವೆಂಬರ್ ನಿಂದ ನಿಲ್ಲಿಸಲಾಗುತ್ತಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಸಿಗುತ್ತಿದ್ದ ಪಡಿತರ ಮುಂದಿನ ತಿಂಗಳಿನಿಂದ ಸಿಗುವುದಿಲ್ಲ ಎಂದು ಹೇಳಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಸುಧಾಂಶು ಪಾಂಡೆ, ದೇಶದ ಮೇಲಿನ ಆರ್ಥಿಕ ಒತ್ತಡ ತಗ್ಗಿಸಲು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದ್ದು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ನೀಡಲಾಗುತ್ತಿದ್ದ ಉಚಿತ ಅಕ್ಕಿ ಯೋಜನೆಯನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದ ಆರ್ಥಿಕತೆ ನಿಧಾನವಾಗಿ ಹಳಿಗೆ ಮರಳುತ್ತಿದೆ. ಹಾಗಾಗಿ ಬಡವರಿಗೆ ನೀಡಲಾಗುತ್ತಿದ್ದ ಉಚಿತ ಅಕ್ಕಿಯನ್ನು  ನವೆಂಬರ್ 30ರಿಂದ ರದ್ದು ಮಾಡಲಾಗುವುದು ಎಂದು ಅವರು ಹೇಳಿದರು.

ದೀಪಾವಳಿ ಸಂದರ್ಭದಲ್ಲಿ ಪೆಟ್ರೋಲ್ , ಡೀಸೆಲ್ ಬೆಲೆ ಇಳಿಕೆ ಮಾಡಿದ ಕೇಂದ್ರ ಸರ್ಕಾರ ಇದರ ಬೆನ್ನಲ್ಲೇ ಕಡು ಬಡವರಿಗೆ ಶಾಕ್ ನೀಡಿದ್ದು, ಮುಂದಿನ ತಿಂಗಳಿನಿಂದ ಬಡವರಿಗೆ ಸಿಗುತ್ತಿದ್ದ ಅಕ್ಕಿ ಸಿಗುವುದಿಲ್ಲ. ಮಧ್ಯಮ ವರ್ಗದವರಿಗೆ ಇದೊಂದು ದೊಡ್ಡ ವಿಷಯ ಅಲ್ಲ ಎನಿಸಬಹುದು. ಆದರೆ, ಎಷ್ಟೋ ಬಡ ಕುಟುಂಬಗಳು ಈ ಅಕ್ಕಿಯನ್ನೇ ನಂಬಿ ಜೀವಿಸುತ್ತಿರುತ್ತವೆ. ಅಂತವರ ಪರಿಸ್ಥಿತಿ ಏನು ಎಂದು ಪ್ರಶ್ನಿಸುವಂತಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ