ಭಾರತೀಯ ವಾಯುಪಡೆಯ ಮತ್ತೊಂದು ಯುದ್ಧ ವಿಮಾನ ಪತನ
29/07/2022
ರಾಜಸ್ಥಾನ: ಭಾರತೀಯ ವಾಯುಪಡೆಯ ಮತ್ತೊಂದು ಎಂಐಜಿ-21 ಯುದ್ಧವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲೆಟ್ ಮೃತಪಟ್ಟಿದ್ದಾರೆ.
ರಾಜಸ್ಥಾನದ ಬರ್ಮೆರ್ ನಲ್ಲಿ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದ್ದು, ಭಿಮ್ಡಾ ಗ್ರಾಮದ ಬಳಿ 9.10ರ ವೇಳೆಗೆ ವಿಮಾನ ಪತನವಾಗಿದೆ.
ಧಗ ಧಗನೆ ಹೊತ್ತಿ ಉರಿಯುತ್ತಿದ್ದ ವಿಮಾನದಿಂದ ಬೆಂಕಿ ದೊಡ್ಡ ಪ್ರದೇಶಕ್ಕೆ ವ್ಯಾಪಿಸಿದ್ದು, ಘಟನೆಯ ದೃಶ್ಯಗಳು ಬೆಚ್ಚಿಬೀಳಿಸಿದೆ.
ವಾಯುಪಡೆ ಘಟನೆ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದು, ಈ ಸಂಬಂಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅವರಿಗೆ ಕರೆ ಮಾಡಿ ಘಟನೆ ಬಗ್ಗೆ ವಿಚಾರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka