ಮಾವೋವಾದಿಗಳ ದಾಳಿಗೆ 3 CRPF ಸಿಬ್ಬಂದಿ ಹುತಾತ್ಮ
ಭುವನೇಶ್ವರ್: ಒಡಿಶಾದ ನುವಾಪಾದ ಜಿಲ್ಲೆಯ ಭದ್ರತಾ ಪೋಸ್ಟ್‌ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚು ದಾಳಿಗೆ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಲ್ಲಿ ಒಬ್ಬರು ಯೋಧ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರೇಣಿಯ ಇಬ್ಬರು ಅಧಿಕಾರಿಗಳು ಸೇರಿದ್ದಾರೆ. ಎಎಸ್ ಐ ಶಿಶುಪಾಲ್ ಸಿಂಗ್, ಎಎಸ್ ಐ ಶಿವ ಲಾಲ್ ಮತ್ತು ಕಾನ್‌ಸ್ಟೇಬಲ್ ಧರ್ಮೇಂದ್ರ ಕುಮಾರ್ ಸಿಂಗ್ ಹುತಾತ್ಮರು ಎಂದು ಗುರುತಿಸಲಾಗಿದೆ.
ಪಡೆಗಳ ಮೇಲೆ ಮಾವೋವಾದಿಗಳು ಸುಧಾರಿತ ಮತ್ತು ಕಚ್ಚಾ ಬ್ಯಾರೆಲ್ ಗ್ರೆನೇಡ್ ಲಾಂಚರ್‌ಗಳನ್ನು ಬಳಸಿ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳನ್ನು ಉಲ್ಲೇಖಿಸಿ ಅಧಿಕಾರಿಗಳು ಹೇಳಿದ್ದಾರೆ.
ನಕ್ಸಲರು ಹುತಾತ್ಮ ಸಿಆರ್ ಪಿಎಫ್ ಸಿಬ್ಬಂದಿ ಬಳಿಯಿದ್ದ ಮೂರು ಎಕೆ-47 ರೈಫಲ್‌ಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಐಜಿ ಪೊಲೀಸ್ (ಕಾರ್ಯಾಚರಣೆ) ಅಮಿತಾಭ್ ಠಾಕೂರ್ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸೇತುವೆ ಬಳಿ ಪತ್ತೆಯಾಗಿದ್ದ ನವಜಾತ ಶಿಶು ಸಾವು
ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ
ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ತಂದೆ ತಾಯಿ!
ವಿಶ್ವದ ಗಮನ ಸೆಳೆದ ಅತೀ ಉದ್ದ ಕಿವಿಯ ಮೇಕೆಮರಿ!
ನಟ ದಿಗಂತ್ ಕುತ್ತಿಗೆಗೆ ಗಂಭೀರ ಏಟು: ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್