ಮದ್ಯ ಪ್ರಿಯರಿಗೆ ಶಾಕ್:  ಮೇ 19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ - Mahanayaka
11:19 AM Thursday 12 - December 2024

ಮದ್ಯ ಪ್ರಿಯರಿಗೆ ಶಾಕ್:  ಮೇ 19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ

madya
06/05/2022

ಉಡುಪಿ: ನಾಳೆಯಿಂದ ಮೇ 19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ ನಡೆಯಲಿದ್ದು, 15 ದಿನಗಳವರೆಗೆ ಮುಷ್ಕರ ನಡೆಸಲು ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ.

ಈ ಕುರಿತಾಗಿ ಉಡುಪಿಯಲ್ಲಿ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಪ್ರತಿಭಟನೆ ಘೋಷಿಸಿದ್ದು, ಕೆಎಸ್​​ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆಯಲಿದ್ದು,  ಒಂದು ದಿನ ಮದ್ಯ ಖರೀದಿಯಾಗದಿದ್ದರೆ,  ರಾಜ್ಯ ಸರ್ಕಾರದ ಬೊಕ್ಕಸಕ್ಕೆ  70 ಕೋಟಿ ರೂಪಾಯಿ ನಷ್ಟವಾಗಲಿದ್ದು,  ಸರ್ಕಾರಕ್ಕೆ ಬಿಸಿ ಮುಟ್ಟಿಸಲು  ಪ್ರತಿಭಟನಾಕಾರರು ತೀರ್ಮಾನ ಕೈಗೊಂಡಿದ್ದಾರೆ.

ನಾಳೆ ಕಲಬುರಗಿಯಲ್ಲಿ ಮದ್ಯ ವ್ಯಾಪಾರಿಗಳಿಂದ ಮುಷ್ಕರ ಮಾಡಲಾಗುತ್ತಿದೆ. ಹೊಸಪೇಟೆ, ಬೆಳಗಾವಿ, ಮೈಸೂರು ಮಂಗಳೂರು ವಿಭಾಗದಲ್ಲಿ ಮದ್ಯ ಸಿಗಲ್ಲ. ಮೇ ತಿಂಗಳ 19ನೇ ತಾರೀಖಿನವರೆಗೆ ನಿರಂತರ ರಾಜ್ಯಾದ್ಯಂತ ಹೋರಾಟ ನಡೆಯಲಿದೆ

ಯಾವ ಜಿಲ್ಲೆಯಲ್ಲಿ ಯಾವ ತಾರೀಕಿನಂದು ಮುಷ್ಕರ:

*ಮೇ 6ರಂದು ಗುಲ್ಬರ್ಗ ವಿಭಾಗದ ಜಿಲ್ಲೆಗಳಾದ ಬೀದರ್, ಗುಲ್ಬರ್ಗ, ರಾಯಚೂರು, ಯಾದಗಿರಿ.

*ಮೇ 10ರಂದು, ಹೊಸಪೇಟೆ ವಿಭಾಗದ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ ಮತ್ತು ಬೆಳಗಾವಿ ವಿಭಾಗದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ ,ಬಿಜಾಪುರ, ಧಾರವಾಡ, ಹಾವೇರಿ.

*ಮೇ 12ರಂದು, ಮೈಸೂರು ವಿಭಾಗದ ಜಿಲ್ಲೆಗಳಾದ ಮೈಸೂರು ,ಚಿಕ್ಕಮಗಳೂರು, ಹಾಸನ ,ಮಂಡ್ಯ ಮತ್ತು ಮಂಗಳೂರು ವಿಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ,ಉಡುಪಿ, ಉತ್ತರಕನ್ನಡ.

*ಮೇ 17ರಂದು- ಬೆಂಗಳೂರು ವಿಭಾಗದ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ,ತುಮಕೂರು.

*ಮೇ 19ರಂದು ಬೆಂಗಳೂರು ನಗರ ವಿಭಾಗದ ಕೆ ಎಸ್ ಬಿ ಸಿ ಎಲ್  ಡಿಪೋಗಳಲ್ಲಿ ಮಧ್ಯ ಖರೀದಿ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೊಟೇಲ್ ನಿಂದ ಖರೀದಿಸಿದ ಆಹಾರದಲ್ಲಿ ಹಾವಿನ ಚರ್ಮ ಪತ್ತೆ!

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ: ಇಬ್ಬರ ದಾರುಣ ಸಾವು

ಸೆಖೆಯಿಂದ ತಪ್ಪಿಸಿಕೊಳ್ಳಲು ಆಟೋದ ಮೇಲೆಯೇ ಗಿಡ ನೆಟ್ಟ ಆಟೋ ಚಾಲಕ

ಗ್ರಾಹಕರಿಗೆ ಶಾಕ್ ನೀಡಲಿರುವ ಬ್ರಿಟಾನಿಯಾ:  ಬಿಸ್ಕೆಟ್ ಗಳ ಬೆಲೆ ಹೆಚ್ಚಾಗಲಿದೆಯೇ?

ಪತ್ನಿ ಮಗುವಿಗೆ ಬೆಂಕಿ ಹಚ್ಚಿ ಬಾವಿಗೆ ಹಾರಿದ ಪಾಪಿ ಪತಿ: ಮೂವರ ದುರಂತ ಸಾವು

ಇತ್ತೀಚಿನ ಸುದ್ದಿ