ಪಾಟ್ನಾ ಸಭೆಗೆ ಇಲ್ಲದ ಆಹ್ವಾನ: ವಿರೋಧ ಪಕ್ಷಗಳ ವಿರುದ್ಧ ಮಾಯಾವತಿ ಗರಂ
ಪಾಟ್ನಾದಲ್ಲಿಂದು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂಚಿತವಾಗಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಆಯೋಜಿಸಿರುವ ಸಭೆ ಬಗ್ಗೆ ಕಿಡಿಕಾರಿದ್ದಾರೆ.
2024 ರಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಸಿದ್ಧರಿರುವ ಪಕ್ಷಗಳನ್ನು ನಾವು ಆಹ್ವಾನಿಸಿದ್ದೇವೆ ಎಂದು ಜೆಡಿಯು ಮುಖ್ಯ ವಕ್ತಾರ ಕೆ.ಸಿ.ತ್ಯಾಗಿ ಹೇಳಿದ್ದಾರೆ. ಆದರೆ ಬಿಎಸ್ಪಿಯು ನಮ್ಮ ಮೈತ್ರಿಯ ಭಾಗವಾಗುವುದಿಲ್ಲ ಎಂದು ಹೇಳುತ್ತದೆ. ಹೀಗಾಗಿ ನಾವು ಬಿಎಸ್ ಪಿಯನ್ನು ಆಹ್ವಾನಿಸಿಲ್ಲ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ಇನ್ನು ಅತ್ತ ಈ ಸಭೆಯಲ್ಲಿ ಭಾಗವಹಿಸಲಿರುವ ಪಕ್ಷಗಳನ್ನು ಗುರಿಯಾಗಿಸಿಕೊಂಡ ಮಾಯಾವತಿ, ಅವರು ಉತ್ತರಪ್ರದೇಶದಲ್ಲಿ ತಮ್ಮ ಉದ್ದೇಶದ ಬಗ್ಗೆ ಗಂಭೀರ ಆಗಿದ್ದಾರೆಂದು ತೋರುವುದಿಲ್ಲ ಎಂದು ಹೇಳಿದರು. ಯುಪಿಯ ಎಂಭತ್ತು ಲೋಕಸಭಾ ಸ್ಥಾನಗಳು ಚುನಾವಣಾ ಯಶಸ್ಸಿನ ಕೀಲಿಕೈ ಎಂದು ಹೇಳಲಾಗುತ್ತದೆ. ಆದರೆ ವಿರೋಧ ಪಕ್ಷಗಳ ವರ್ತನೆಯಿಂದ ಇದನ್ನು ಗೆಲ್ಲುವ ಸಾಧ್ಯತೆ ತೋರುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಹಿಂದಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಬಿಜೆಪಿ ಮತ್ತು ಕಾಂಗ್ರೆಸ್ ನಂತಹ ಪಕ್ಷಗಳು ಬಿ.ಆರ್.ಅಂಬೇಡ್ಕರ್ ರಚಿಸಿದ ಮಾನವೀಯ ಸಮಾನತೆಯ ಸಂವಿಧಾನವನ್ನು ಜಾರಿಗೆ ತರುವ ಸಾಮರ್ಥ್ಯವನ್ನು ಹೊಂದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ಇಂತಹ ಸನ್ನಿವೇಶದಲ್ಲಿ ಜೂನ್ 23 ರಂದು ನಿತೀಶ್ ಕುಮಾರ್ ಅವರು ವಿರೋಧ ಪಕ್ಷದ ನಾಯಕರ ಪಾಟ್ನಾ ಸಭೆಯನ್ನು ಹೃದಯಗಳಿಗಿಂತ ಹೆಚ್ಚಾಗಿ ಕೈ ಜೋಡಿಸುವ ಬಗ್ಗೆಯೇ ಹೆಚ್ಚು ಚರ್ಚಿಸಿದ್ದಾರೆ ಎಂದು ತೋರುತ್ತದೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw