ಶಾಸಕ ಎಂ.ಸಿ.ಮನಗೊಳಿ ನಿಧನ | ಗಣ್ಯರಿಂದ ಸಂತಾಪ
ಬೆಂಗಳೂರು: ಮಾಜಿ ಸಚಿವ, ವಿಜಯಪುರದ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕ ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಂ.ಸಿ.ಮನಗೊಳಿ ಅವರು ಗುರುವಾರ ಬೆಳಗ್ಗೆ ನಿಧನರಾಗಿದ್ದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.
ಎರಡು ಬಾರಿ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರು, ತಮ್ಮ 85ನೇ ವರ್ಷದಲ್ಲಿ ನಿಧನರಾಗಿದ್ದಾರೆ. 1994ರಲ್ಲಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಹಾಗೂ 2018ರ ಕುಮಾರಸ್ವಾಮಿ ಸಂಪುಟದಲ್ಲಿ ಮನಗೂಳಿ ಸಚಿವರಾಗಿದ್ದರು.
ಮನಗೂಳಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಲ್ಲಿ ಕೆಲಕಾಲ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಆ ಬಳಿಕ ಸಿಂದಗಿಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ನಾಲ್ವರು ಪುತ್ರರನ್ನು ಅಗಲಿದ್ದಾರೆ.
ಜಾತ್ಯತೀತ ಜನತಾದಳದ ಹಿರಿಯ ನಾಯಕ,
ಮಾಜಿ ಸಚಿವ ಮತ್ತು ಸಿಂಧಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ಅತೀವ ದು:ಖವಾಗಿದೆ.
ಅವರಿಗೆ ನನ್ನ ಶ್ರದ್ಧಾಂಜಲಿ.ದೀರ್ಘಕಾಲದಿಂದ ಸ್ನೇಹಿತರಾಗಿದ್ದ ಮನಗೂಳಿ ಜನಾನುರಾಗಿ ರಾಜಕಾರಣಿಯಾಗಿದ್ದರು.
ಅವರ ಕುಟುಂಬವರ್ಗದ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ. pic.twitter.com/tXdbcLKIuP
— Siddaramaiah (@siddaramaiah) January 28, 2021
ನನ್ನ ಮಾರ್ಗದರ್ಶಕರಂತೆ ಇದ್ದ, ಜೆಡಿಎಸ್ ಪಕ್ಷದ ಪ್ರಬಲ ಪ್ರತಿಪಾದಕರಾಗಿದ್ದ, ದೇವೇಗೌಡರ ಪ್ರತಿಮೆ ಸ್ಥಾಪಿಸಿ ಅವರನ್ನು ದೇವರಂತೆ ಕಾಣುತ್ತಿದ್ದ ಎಂ.ಸಿ.ಮನಗೂಳಿ ಅವರು ಇಂದು ನಿಧನರಾಗಿದ್ದಾರೆ. ಅಧಿಕಾರ ಇರಲಿ, ಇರದೇ ಹೋಗಲಿ ಅವರು ಎಂದೂ ನಮ್ಮವರೇ ಆಗಿದ್ದರು. ಮನಗೂಳಿ ಅವರ ಅಗಲಿಕೆ ಜೆಡಿಎಸ್ ಕುಟುಂಬಕ್ಕೆ ಆದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. pic.twitter.com/AVDKDo8TRJ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2021
ಮಾಜಿ ಸಚಿವರು, ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀ ಎಂ.ಸಿ.ಮನಗೂಳಿ ವಿಧಿವಶರಾದ ಸುದ್ದಿ ತೀವ್ರ ಆಘಾತ ತಂದಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ
— B.S.Yediyurappa (Modi Ka Parivar) (@BSYBJP) January 28, 2021