ಮಾಧ್ಯಮಗಳು ಕ್ರೀಡಾಪಟುಗಳ ಬದಲಾಗಿ ಆರೋಪಿ ಬ್ರಿಜ್ ಭೂಷಣ್ ಸಿಂಗ್ ನ್ನು ಬೆಂಬಲಿಸುತ್ತಿವೆ: ಕುಸ್ತಿಪಟುಗಳಿಂದ ಆರೋಪ
ನವದೆಹಲಿ: ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕ್ರೀಡಾಪಟುಗಳು ಮಾಧ್ಯಮಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಮಾಧ್ಯಮಗಳು ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಆರೋಪಿಸಿದೆ.
ಮಾಧ್ಯಮಗಳು ಬ್ರಿಜ್ ಭೂಷಣ್ ಸಿಂಗ್ ಗೆ ಮಾತನಾಡಲು ವೇದಿಕೆ ನೀಡಬಾರದು, ಆಟಗಾರರಿಗಿಂತ ಮಾಧ್ಯಮಗಳು ಬ್ರಿಜ್ ಭೂಷಣ್ ಅವರನ್ನು ಬೆಂಬಲಿಸುತ್ತಿವೆ. ನೀವು ಅವರ ಕ್ರಿಮಿನಲ್ ದಾಖಲೆಗಳನ್ನು ನೋಡುತ್ತೀರಿ. ಇಲ್ಲಿ ಕುಳಿತಿರುವ ಯಾವುದೇ ಆಟಗಾರ ಅಥವಾ ಇತರ ಕ್ರೀಡೆಗಳ ಆಟಗಾರರು ಕ್ರಿಮಿನಲ್ ದಾಖಲೆ ಹೊಂದಿದ್ದಾರೆಯೇ? ಎಂದು ಕುಸ್ತಿಪಟು ಬಜರಂಗ್ ಪುನಿಯಾ ಪ್ರಶ್ನಿಸಿದ್ದಾರೆ.
ಬಿಜೆಪಿ ಸಂಸದ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಒಂದು ಪೋಕ್ಸೊ ಕಾಯ್ದೆ ಸೇರಿದಂತೆ ಎರಡು ಎಫ್ ಐಆರ್‌ಗಳನ್ನು ದಾಖಲಿಸಿದ್ದಾರೆ. ಬ್ರಿಜ್ ಭೂಷಣ್ ಸಿಂಗ್ ಅವರು ಕಳೆದ 12 ವರ್ಷಗಳಿಂದ ಡಬ್ಲ್ಯುಎಫ್ ಐ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ.
ಇನ್ನೂ ಕ್ರೀಡಾಪಟುಗಳ ಹೋರಾಟ ರಾಜಕೀಯ ಪ್ರೇರಿತ ಎಂದು ಬ್ರಿಜ್ ಭೂಷಣ್ ಸಿಂಗ್ ಆರೋಪಿಸಿದ್ದು, ಈ ಹೇಳಿಕೆಯನ್ನು ಮಾಧ್ಯಮಗಳು ಹೈಲೈಟ್ ಮಾಡಿರೋದು ಕುಸ್ತಿಪಟುಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಈ ಹೇಳಿಕೆಯನ್ನು ತಳ್ಳಿ ಹಾಕಿರುವ ಕುಸ್ತಿಪಟುಗಳು, ಇಲ್ಲಿ ಹೋರಾಟ ಮಾಡುತ್ತಿರುವವರಲ್ಲಿ ಎಷ್ಟು ಜನ ರಾಜಕೀಯ ಪಕ್ಷದವರಿದ್ದಾರೆ? ಎಂದು ಪ್ರಶ್ನಿಸಿದ್ದಾರಲ್ಲದೇ. ಪ್ರತಿಭಟನೆ ನಡೆಸುತ್ತಿರುವವರೆಲ್ಲರೂ ಕ್ರೀಡಾಪಟುಗಳು ಎಂದು ತಿರುಗೇಟು ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw