ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಸಂಬಂಧ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.
ತಡ ರಾತ್ರಿ ಪ್ರಜ್ವಲ್ ಅವರನ್ನು ಬಂಧಿಸಲಾಗಿತ್ತು. ಇಡೀ ರಾತ್ರಿ ಪ್ರಜ್ವಲ್ ಎಸ್ ಐಟಿ ಕಚೇರಿಯಲ್ಲಿ ಕಾಲ ಕಳೆದರು. ವೈದಕೀಯ ಪರೀಕ್ಷೆ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಆಸ್ಪತ್ರೆ ಗೇಟ್‌ಗಳಿಗೆ ಬ್ಯಾರಿಕೇಡ್‌ಗಳನ್ನು ಹಾಕಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಅನಾರೋಗ್ಯ ಸಮಸ್ಯೆ ಏನಾದರೂ ಇದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತದೆ.
ಇನ್ನೂ ಪ್ರಜ್ವಲ್ ರೇವಣ್ಣ ಅವರನ್ನು ಕರೆತರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಬಳಿ ಜನಸಾಮಾನ್ಯರಿಗೆ ತೊಂದರೆಯಾಗಿದ್ದು, ರೋಗಿಗಳನ್ನು ಆಸ್ಪತ್ರೆಯ ಒಳಗೆ ಬಿಡುತ್ತಿಲ್ಲ ಎಂದು ಕೆಲವು ರೋಗಿಗಳು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.
ವೈದ್ಯಕೀಯ ಪರೀಕ್ಷೆಯ ನಂತರ ಪ್ರಜ್ವಲ್ ರೇವಣ್ಣ ಅವರನ್ನು ಮಧ್ಯಾಹ್ನದೊಳಗೆ ಕೋರ್ಟ್‌ಗೆ ಹಾಜರು ಪಡಿಸಲಾಗುತ್ತದೆ. ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯೂ ನಡೆಯುತ್ತದೆ.
ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ 2 ಅತ್ಯಾಚಾರ ಪ್ರಕಣಗಳು ದಾಖಲಾಗಿವೆ. ಒಂದೊಂದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಯಲಿದೆ. ಇವತ್ತು ಕೋರ್ಟ್‌ಗೆ ಹಾಜರು ಪಡಿಸಿದ ನಂತರ ಎಸ್ ಐಟಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: