ಮಂಗಳೂರು: ಮೀನುಗಾರನನ್ನು ತಲೆಕೆಳಗಾಗಿಸಿ ನೇತುಹಾಕಿ ದೌರ್ಜನ್ಯ: ವಿಡಿಯೋ ವೈರಲ್

fish man
23/12/2021

ಮಂಗಳೂರು: ಮಂಗಳೂರಿನ ಬಂದರ್ ನ ದಕ್ಕೆಯಲ್ಲಿ ಮೀನುಗಾರನೊಬ್ಬನನ್ನು ತಲೆಕೆಳಗಾಗಿ ನೇತುಹಾಕಿ ಅಮಾನವೀಯವಾಗಿ ಥಳಿಸುತ್ತಿರುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೊಬೈಲ್ ಕಳವು ವಿಚಾರಕ್ಕೆ ಸಂಬಂಧಿಸಿದಂತೆ ಇತರ ಮೀನುಗಾರರು ಸೇರಿಕೊಂಡು ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಆಂಧ್ರಪ್ರದೇಶ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂಬಾತ ದೌರ್ಜನ್ಯಕ್ಕೊಳಗಾದ ಮೀನುಗಾರ ಎಂದು ಹೇಳಲಾಗಿದೆ.

ವಿಡಿಯೋದಲ್ಲಿ ತಮಿಳು ಮತ್ತು ತೆಲುಗು ಭಾಷೆಯಲ್ಲಿ ಮಾತನಾಡುತ್ತಿರುವುದು ಕೇಳಿ ಬಂದಿದೆ  ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದ ಮಂಗಳೂರಿನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಆರೋಪಿಗಳನ್ನು ಪತ್ತೆ ನಡೆಸಲು ತಕ್ಷಣವೇ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ ಆಡಳಿತದಲ್ಲಿ ಮಾತ್ರ ಹಿಂದೂಗಳ ಹಬ್ಬ ಆಚರಿಸಲು ಸಾಧ್ಯವಾಗುತ್ತದೆ | ಯೋಗಿ ಆದಿತ್ಯನಾಥ್

ಕಾನದ-ಕಟದರ ಬಾಲ್ಯ: ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 11

ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಹಿಂದಿನಿಂದ ಕಾಯ್ದೆಗೆ ಬೆಂಬಲ‌ ನೀಡುತ್ತಿದೆ | ಬಿಜೆಪಿ ಶಾಸಕ ಯತ್ನಾಳ್

ಹೇಗೆಂದರೆ ಹಾಗೆ ಬದುಕಲು ನಮ್ಮ ದೇಶ ಧರ್ಮಛತ್ರವಲ್ಲ: ಮತಾಂತರ ಕುರಿತು ಆರಗ ಜ್ಞಾನೇಂದ್ರ ಹೇಳಿಕೆ

ಮತಾಂತರ ನಿಷೇಧ ಕಾಯ್ದೆಯ ದುರ್ಬಳಕೆಯ ಸಾಧ್ಯತೆ ಹೆಚ್ಚಿದೆ: ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಂ

ಇತ್ತೀಚಿನ ಸುದ್ದಿ

Exit mobile version