ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು!
ಬೆಳ್ತಂಗಡಿ: ಮುಗೇರಡ್ಕದಲ್ಲಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರುಪಾಲಾದ ಘಟನೆ ಸೋಮವಾರ ರಾತ್ರಿಯ ವೇಳೆ ನಡೆದಿದ್ದು, ಆತನಿಗಾಗಿ ನದಿಯಲ್ಲಿ ಮುಳುಗು ತಜ್ಞರು ಹುಡುಕಾಟ ನಡೆಸುತ್ತಿದ್ದಾರೆ.
ಮೊಗ್ರು ಗ್ರಾಮದ ನಿವಾಸಿ ಜನಾರ್ಧನ (42) ಎಂಬವರೇ ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಇವರು ತಮ್ಮ ಸ್ನೇಹಿತ ಮಹೇಶ್ ಎಂಬವರೊಂದಿಗೆ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು ನದಿಗಿಳಿದ ಜನಾರ್ಧನ ಅವರು ನೀರಿನಲ್ಲಿ ನಾಪತ್ತೆಯಾಗಿದ್ದರು.
ಈ ವೇಳೆ ಜೊತೆಗಿದ್ದ ಮಹೇಶ್ ಆದರೆ ಯಾವುದೇ ಹುಡುಕಾಟಕ್ಕೆ ಮುಂದಾಗದೆ, ಅಲ್ಲಿ ಸ್ಥಳೀಯರಿಗೂ ಮಾಹಿತಿ ನೀಡದೇ ಬೇಜವಾಬ್ದಾರಿ ಮೆರೆದಿದ್ದು, ನೇರವಾಗಿ ಜನಾರ್ಧನನ ಮನೆಗೆ ಹೋಗಿ ಆತ ನೀರಿನಲ್ಲಿ ಮುಳುಗಿರುವುದಾಗಿ ಹೇಳಿದ್ದಾನೆ ಎನ್ನಲಾಗಿದೆ.
ಬಳಿಕ ಸ್ಥಳೀಯರು ಈ ಬಗ್ಗೆ ಮಾಹಿತಿ ಪಡೆದು ಮುಳುಗು ತಜ್ಞರ ಸಹಕಾರದೊಂದಿಗೆ ನದಿಯಲ್ಲಿ ಹುಡುಕಾಟ ಮುಂದುವರಿಸಿದ್ದಾರೆ. ಮಂಗಳವಾರ ಬೆಳಿಗ್ಗೆಯೂ ಹುಡುಕಾಟ ಮುಂದುವರಿದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw