ಮೀನು ಹಿಡಿಯಲು ತೆರಳಿದ್ದ ಯುವಕ ಬಲೆಯಲ್ಲಿ ಸಿಲುಕಿ ಸಾವು - Mahanayaka
3:15 AM Wednesday 11 - December 2024

ಮೀನು ಹಿಡಿಯಲು ತೆರಳಿದ್ದ ಯುವಕ ಬಲೆಯಲ್ಲಿ ಸಿಲುಕಿ ಸಾವು

shibu
06/04/2022

ಇಡುಕ್ಕಿ: ಕುಳಮಾವು ಅಣೆಕಟ್ಟಿನಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಕುಳಮಾವು ಕುನ್ನುಮೆಲ್ ಕೆ.ಸಿ.ಶಿಬು ಮೃತಪಟ್ಟಿದ್ದ ಯುವಕ.  ಶಿಬು ನಿನ್ನೆ ಸಂಜೆ ಕುಳಮಾವು ಅಣೆಕಟ್ಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದರು.  ಆದರೆ ರಾತ್ರಿಯಾದರೂ ಹಿಂತಿರುಗಲಿಲ್ಲ.

ಇಂದು ಬೆಳಗ್ಗೆ ಮೀನು ಹಿಡಿಯಲು ತೆರಳಿದ್ದ ನೆರೆಹೊರೆಯವರಿಗೆ ಶಿಬುನ ಮೃತದೇಹ  ಬಲೆಯಲ್ಲಿ ಸಿಲುಕಿ ಕೊಂಡ  ಸ್ಥಿತಿಯಲ್ಲಿ ಕಂಡುಬಂದಿದೆ.ಘಟನೆಯ ಮಾಹಿತಿ ಪಡೆದ ಕುಳಮಾವು ಪೊಲೀಸರು ಮತ್ತು ತೊಡುಪುಳ ಅಗ್ನಿಶಾಮಕ ದಳದವರು ಬಂದು ಮೃತದೇಹವನ್ನು ಹೊರತೆಗೆದಿದ್ದಾರೆ.

ಅಣೆಕಟ್ಟಿನಲ್ಲಿ ಬಲೆ ಬೀಸುವ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.  ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಇಡುಕ್ಕಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎರಡು ತಲೆ ಹಾವು ಮಾರಾಟ ಯತ್ನ ಆರೋಪಿಗಳ ಬಂಧನ

ನಟ ಮೋಹನ್ ಲಾಲ್ ವಿರುದ್ಧ ದಂತ ಪ್ರಕರಣ: ಸರ್ಕಾರದ ನಿರ್ಧಾರದ ವಿರುದ್ಧದ ಅರ್ಜಿಗಳನ್ನು ತಿರಸ್ಕರಿಸಿದ ಕೋರ್ಟ್

ಬೆಲೆ ಏರಿಕೆ ನಡುವೆ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್

ದೃಷ್ಟಿ ಹೀನರಿಗೆ ವಿಶೇಷ ಶೂ ನಿರ್ಮಿಸಿದ ಬಾಲಕ: ಈ ಶೂನ ವಿಶೇಷತೆ ಏನು?

ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆಯ ನಂತರ ಮತ್ತೊಂದು ಶಾಕಿಂಗ್ ನ್ಯೂಸ್

 

ಇತ್ತೀಚಿನ ಸುದ್ದಿ