ಮೀನು ವ್ಯಾಪಾರಿ ಮೇಲೆ ತಲವಾರಿನಿಂದ ದಾಳಿ: 2 ಲಕ್ಷ ರೂ. ನಗದು ದರೋಡೆ
ಉಳ್ಳಾಲ: ಕಲ್ಲಾಪು ಬಳಿ ಮೀನು ವ್ಯಾಪಾರಿಯನ್ನು ತಡೆದು ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ನಡೆಸಿ ಟೆಂಪೋದಲ್ಲಿದ್ದ 2 ಲಕ್ಷ ರೂ. ದರೋಡೆ ನಡೆಸಿರುವ ಘಟನೆ ರಾ.ಹೆ.66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು. ರಾ.ಹೆ 66 ರ ಕಲ್ಲಾಪು ಸಮೀಪ ಮೀನು ಮಾರಾಟ ನಡೆಸುತ್ತಿರುವ ಇವರು ಎಂದಿನಂತೆ ಮನೆಯಿಂದ ಧಕ್ಕೆಗೆ ಟೆಂಪೋ ಮೂಲಕ ಮೀನು ಖರೀದಿಸಲು ತೆರಳುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಕಡೆಯಿಂದ ಕೆಂಪು ಬಣ್ಣದ ರಿಟ್ಝ್ ಕಾರಿನಲ್ಲಿ ತಂಡವೊಂದು ಟೆಂಪೋವನ್ನು ಹಿಂಬಾಲಿಸಿ ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ.
ಬಳಿಕ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮುಸುಕುಧಾರಿಗಳು ಇಳಿದು ತಲವಾರಿನಿಂದ ದಾಳಿ ನಡೆಸಿದ್ದಾರೆ. ಅಲ್ಲದೆ ಟೆಂಪೋ ಡ್ಯಾಷ್ ಬೋರ್ಡಿನಲ್ಲಿರಿಸಿದ್ದ 2 ಲಕ್ಷ ರೂ. ನಗದನ್ನು ಅಪಹರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಇದೇ ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೋರ್ವರು ತಕ್ಷಣ ಗಾಯಗೊಂಡಿದ್ದ ಮುಸ್ತಾಫ ಅವರನ್ನು ತೊಕ್ಕೊಟ್ಟು ನೇತಾಜಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಈ ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಸಿಪಿ ದಿನಕರ್ ಶೆಟ್ಟಿ ನೇತೃತ್ಬದ ಪೊಲೀಸ್ ತಂಡ ತನಿಖೆ ಆರಂಭಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉಕ್ರೇನ್ ನಲ್ಲಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಣೆ
ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಶೇನ್ ವಾರ್ನ್ ಹಠಾತ್ ನಿಧನಕ್ಕೆ ಕಾರಣವೇನು?
ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತ:10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ
ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ: 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ