ವಯನಾಡ್ ಉಪಚುನಾವಣೆ: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ - Mahanayaka
10:02 PM Saturday 19 - October 2024

ವಯನಾಡ್ ಉಪಚುನಾವಣೆ: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

19/10/2024

ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಪಕ್ಷವು ನವ್ಯ ಹರಿದಾಸ್ ಎಂಬುವವರನ್ನು ಕಣಕ್ಕಿಳಿಸಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

ನವ್ಯಾ ಹರಿದಾಸ್ ಯಾರು?
39 ವರ್ಷದ ನವ್ಯಾ ಹರಿದಾಸ್ ಅವರು ಕೋಳಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಎರಡು ಬಾರಿ ಕೌನ್ಸಿಲರ್ ಮತ್ತು ಕಾರ್ಪೊರೇಶನ್ ನಲ್ಲಿ ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿದ್ದಾರೆ. ಆಕೆ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಹರಿದಾಸ್ ಅವರು ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ಅಂಗಸಂಸ್ಥೆಯಾದ ಕೆ. ಎಂ. ಸಿ. ಟಿ ಎಂಜಿನಿಯರಿಂಗ್ ಕಾಲೇಜಿನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿ. ಟೆಕ್ ಪದವಿ ಪಡೆದಿದ್ದಾರೆ.

ಇವರು 2021 ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕೋಝಿಕೋಡ್ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ದೇವರಕೋವಿಲ್ ವಿರುದ್ಧ ಸೋತಿದ್ದರು.
ನಾಮನಿರ್ದೇಶನದ ನಂತರ ಇಂಡಿಯಾ ಟುಡೇ ಟಿವಿಯೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ನವ್ಯಾ ಹರಿದಾಸ್, ವಯನಾಡ್ ಕ್ಷೇತ್ರದ ಅಗತ್ಯಗಳನ್ನು ಎತ್ತಿ ತೋರಿಸಿದರು.

“ವಯನಾಡಿನ ಜನರಿಗೆ ಅಲ್ಲಿ ಸ್ವಲ್ಪ ಪ್ರಗತಿಯ ಅಗತ್ಯವಿದೆ. ಕಾಂಗ್ರೆಸ್ ಕುಟುಂಬವು ವಾಸ್ತವವಾಗಿ ವಯನಾಡಿನ ಜನರ ಅಗತ್ಯಗಳನ್ನು ಪೂರೈಸುತ್ತಿಲ್ಲ. ಈ ಚುನಾವಣೆಯ ನಂತರ, ವಯನಾಡ್ ನಿವಾಸಿಗಳಿಗೆ ತಮ್ಮ ಸಮಸ್ಯೆಗಳನ್ನು ಪರಿಹರಿಸಬಲ್ಲ ಸಂಸತ್ತಿನಲ್ಲಿ ಉತ್ತಮ ಸದಸ್ಯರ ಅಗತ್ಯವಿದೆ “ಎಂದು ಅವರು ಹೇಳಿದರು.
ಸ್ಥಳೀಯ ಸಮುದಾಯದ ಕಾಳಜಿಗಳಿಗೆ ಆದ್ಯತೆ ನೀಡುವ ಪ್ರತಿನಿಧಿಯನ್ನು ಹೊಂದುವ ಮಹತ್ವವನ್ನು ಹರಿದಾಸ್ ಒತ್ತಿ ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ