ಆರ್ ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ
1990ರ ಬ್ಯಾಚ್ ನ ಐಎಎಸ್ ಅಧಿಕಾರಿ ಸಂಜಯ್ ಮಲ್ಹೋತ್ರಾ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮುಂದಿನ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿಸೆಂಬರ್ 10 ರಂದು ಕೊನೆಗೊಳ್ಳಲಿದೆ.
ದಾಸ್ ಅವರು 2018 ರ ಡಿಸೆಂಬರ್ ನಲ್ಲಿ ಊರ್ಜಿತ್ ಪಟೇಲ್ ಅವರಿಂದ ಅಧಿಕಾರ ವಹಿಸಿಕೊಂಡಿದ್ದರು.
ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಮಲ್ಹೋತ್ರಾ ಹಣಕಾಸು, ತೆರಿಗೆ, ವಿದ್ಯುತ್, ಮಾಹಿತಿ ತಂತ್ರಜ್ಞಾನ ಮತ್ತು ಗಣಿಗಾರಿಕೆಯಲ್ಲಿ 33 ವರ್ಷಗಳ ವೈವಿಧ್ಯಮಯ ಅನುಭವವನ್ನು ಹೊಂದಿದ್ದಾರೆ.
ಕಾನ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಪದವೀಧರರಾಗಿರುವ ಅವರು ಅಮೆರಿಕದ ಪ್ರಿನ್ಸ್ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj