ಲಾಕ್ ಡೌನ್ ಜಾರಿಯಾದರೂ ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ | ಡಿ.ಕೆ.ಶಿವಕುಮಾರ್ - Mahanayaka
5:55 AM Thursday 12 - December 2024

ಲಾಕ್ ಡೌನ್ ಜಾರಿಯಾದರೂ ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ | ಡಿ.ಕೆ.ಶಿವಕುಮಾರ್

dk shivakumar
03/01/2022

ಮೈಸೂರು: ಲಾಕ್ ಡೌನ್ ಜಾರಿಯಾದರೂ ನಾವು ಹೆದರುವುದಿಲ್ಲ.  ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಪಾದಯಾತ್ರೆಯನ್ನು ರಾಜಕಾರಣಕ್ಕಾಗಿ ಎಂದು ಬಿಂಬಿಸುತ್ತಿದ್ದಾರೆ. ನಮಗೆ ಅಧಿಕಾರ ಒಂದೇ ಮುಖ್ಯವಲ್ಲ. ನಮಗೆ ಸಾಮಾಜಿಕ ಕಳಕಳಿಯಿದೆ. ಬಹುತೇಕ ವಿಷಯಗಳಲ್ಲಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ ಎಂದರು.

ಮೇಕೆದಾಟು ಯೋಜನೆಯ ಸ್ಥಳ ಒಂದು ಬೆಂಗಳೂರು, ಮತ್ತೊಂದು ಮೈಸೂರು ಜಿಲ್ಲೆಯನ್ನು ಒಳಗೊಂಡಿತ್ತು. ನಂತರದ ದಿನಗಳಲ್ಲಿ ರಾಮನಗರ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಗೆ ಒಳಗೊಂಡಿದೆ. ರಾಮನಗರ ಜಿಲ್ಲೆಯ ಕನಕಪುರ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರಿನ ನಡುವೆ ಈ ಯೋಜನೆ ಬರಲಿದೆ. ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ. ಆದರೆ, ನಾವು ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಲಾಕ್​ಡೌನ್​ ಜಾರಿಗೂ ನಾವು ಹೆದರುವುದಿಲ್ಲ‌. ಕೊರೊನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಪಾದಯಾತ್ರೆ ತಡೆಯಲು ಯತ್ನಿಸುತ್ತಿದ್ದಾರೆ‌. ಲಾಕ್​ ಡೌನ್ ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ‌ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಡಗಿನಲ್ಲೇ 2,000 ಪ್ರಯಾಣಿಕರಿಗೆ ಕ್ವಾರಂಟೈನ್!

ನೀರಿನ ರಭಸಕ್ಕೆ ಸಿಕ್ಕಿ ಓರ್ವ ಯುವತಿ ಸಹಿತ ಐವರು ಯುವಕರು ನೀರು ಪಾಲು

ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!

ಉಡುಪಿ: ಸಾವಿತ್ರಿಭಾಯಿ ಫುಲೆ ಜಯಂತಿ, ಭೀಮಾ ಕೊರೆಗಾಂವ್ ವಿಜಯೋತ್ಸವ ಆಚರಣೆ

ಅಪಾರ್ಟ್​ಮೆಂಟ್ ಫ್ಲಾಟ್​ನಲ್ಲಿ ಯುವತಿಯ ಅನುಮಾನಾಸ್ಪದ ಸಾವು: ಟೆಕ್ಕಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ