ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಆದೇಶ - Mahanayaka
5:13 PM Monday 16 - September 2024

ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಆದೇಶ

cm bommai
12/01/2022

ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದು,  ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ ಸಿ.ಎಸ್‌. ರವಿಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ. ರಾಮನಗರ ಜಿಲ್ಲಾಧಿಕಾರಿ, ಎಸ್​.ಪಿ. ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ.

ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಹೈಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ‌ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.


Provided by

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ಆಕ್ಷೇಪ ಹಿನ್ನೆಲೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ದೂರವಾಣಿ ಮೂಲಕ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ‌, ಸಚಿವರಾದ ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ಆರ್‌.ಅಶೋಕ್, ಡಾ.ಸುಧಾಕರ್, ಸಿಎಸ್ ರವಿಕುಮಾರ್, ಡಿಜಿ ಮತ್ತು ಐಜಿಪಿ ಸೂದ್, ಎಜಿ ನಾವದಗಿ ಜತೆ ಸಿಎಂ ಚರ್ಚೆ ಮಾಡಿದ್ದಾರೆ.

ಸರ್ಕಾರದ ಮುಂದಿನ ನಿಲುವಿನ ಬಗ್ಗೆ ಬೊಮ್ಮಾಯಿ ಚರ್ಚಿಸಿದ್ದು ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ವಯ ಕ್ರಮದ ಬಗ್ಗೆ ಮಾತುಕತೆ ನಡೆಸಲಾಗಿದೆ. ಕ್ರಮಕೈಗೊಳ್ಳುವ ವಿಚಾರವಾಗಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉದ್ಘಾಟನೆಗೊಂಡು ಒಂದೇ ದಿನದಲ್ಲಿ ಬಾಗಿಲು ಮುಚ್ಚಿದ ಆಸ್ಪತ್ರೆ!

ಕೋತಿಯ ಅಂತ್ಯಸಂಸ್ಕಾರ ಮಾಡಿ, ತಿಥಿ ಊಟ ಬಡಿಸಿದ್ದಕ್ಕೆ ಜನರ ಮೇಲೆ ಕೇಸ್!

ಬಿಜೆಪಿ ತೊರೆದು 24 ಗಂಟೆಗಳಲ್ಲೇ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಅರೆಸ್ಟ್ ವಾರೆಂಟ್!

“ಲೋನ್ ಆ್ಯಪ್ ನಿಂದ ಸಾಲ ಪಡೆದು ಮಾನ, ಪ್ರಾಣ ಕಳೆದುಕೊಳ್ಳಬೇಡಿ”

1ರಿಂದ 9ನೇ ತರಗತಿ ಮಕ್ಕಳಿಗೆ ನಾಳೆಯಿಂದ ಚಂದನ ಟಿವಿಯಲ್ಲಿ ಪಾಠ!

ಇತ್ತೀಚಿನ ಸುದ್ದಿ