ದಾರಿಯಲ್ಲಿ ಹೋಗುತ್ತಿದ್ದವರನ್ನು ಹಿಡಿದು ಥಳಿಸಿದ ಮಾನಸಿಕ ಅಸ್ವಸ್ಥ!
ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಯಾವುದೇ ಕಾರಣವಿಲ್ಲಧ ದಾರಿ ಹೋಕರ ಮೇಲೆ ಈತ ಏಕಾ ಏಕಿ ಹಲ್ಲೆ ನಡೆಸಿದ್ದು ಹಲವರು ಈತನಿಂದ ಹಲ್ಲೆಗೆ ಒಳಗಾದರು. ಕೂಡಲೇ ಸ್ಥಳೀಯರು ಈತನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಈತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ.
ಈತ ತನ್ನ ವಿಳಾಸವನ್ನು ಆಗಾಗ ಬೇರೆ ಬೇರೆಯಾಗಿ ಹೇಳುತ್ತಿದ್ದು ಇದರಿಂದಾಗಿ ಈತನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಸಾಧ್ಯವಾಗಿಲ್ಲ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka