ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ - Mahanayaka
9:39 PM Tuesday 10 - December 2024

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ

araga
20/12/2021

ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಎಂಇಎಸ್ ನಿಷೇಧಿಸುವ ಕುರಿತು ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಯಾವುದೇ ರೀತಿಯ ಗಲಾಟೆ ಇಲ್ಲ. ಕನ್ನಡಿಗರು ಹಾಗೂ ಮರಾಠಿಗರು ಇಲ್ಲಿ ಸೌಹಾರ್ದಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ ಎಂದರು.

ಪ್ರಜಾಪ್ರಭುತ್ವದ ತಳಹದಿಯಲ್ಲಿ ಕನ್ನಡ ಪರ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿ. ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಜನರೇ ಬ್ಯಾನ್ ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಎಂಇಎಸ್ ಸಂಘಟನೆಯ ಮೇಲೆ ನಿಷೇಧ ಹೇರುವ ಬಗ್ಗೆ ಚಿಂತನೆ ಮಾಡುತ್ತೇವೆ. ನಾಡದ್ರೋಹಿ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶೌಚಾಲಯದ ಗೋಡೆ ತೆರವುಗೊಳಿಸುತ್ತಿದ್ದ ವೇಳೆ ಮೈಮೇಲೆ ಬಿದ್ದ ಗೋಡೆ: ಇಬ್ಬರು ಮಹಿಳೆಯರ ದಾರುಣ ಸಾವು

ಟ್ರಾವೆಲ್ ಹಿಸ್ಟರಿಯೇ ಇಲ್ಲದ ವಿದ್ಯಾರ್ಥಿನಿಗೆ ಒಮಿಕ್ರಾನ್: ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಒಮಿಕ್ರಾನ್ ಕೇಸ್ ಎಷ್ಟು?

ಪ್ರೇಮ ವೈಫಲ್ಯ: ಬೀದರ್ ಮೂಲದ ವಿದ್ಯಾರ್ಥಿನಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

ಭಾರತ 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಇತ್ತೀಚಿನ ಸುದ್ದಿ