ಮೆಟ್ರೋ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ - Mahanayaka
7:39 AM Thursday 12 - December 2024

ಮೆಟ್ರೋ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

pm modi
06/03/2022

ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಪುಣೆ ಮೆಟ್ರೋ ಮಾರ್ಗವನ್ನು ಭಾನುವಾರ ಉದ್ಘಾಟಿಸಿದ್ದು, ಈ ಯೋಜನೆ ಪುಣೆಯಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಒದಗಿಸುವ ಪ್ರಯತ್ನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿ. 24, 2016 ರಂದು ಪುಣೆ ಮೆಟ್ರೋ ಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದ ಪ್ರಧಾನಿ ಮೋದಿ ಇಂದು 11.30ಕ್ಕೆ ಮೆಟ್ರೋ ಯೋಜನೆಗೆ ಚಾಲನೆ ನೀಡಿದರು. ಬಳಿಕ ಕೆಲವು ವಿದ್ಯಾರ್ಥಿಗಳೊಂದಿಗೆ ಆನಂದನಗರ ಮೆಟ್ರೋ ನಿಲ್ದಾಣದಿಂದ ಮೆಟ್ರೋದಲ್ಲಿ ಪ್ರಯಾಣಿಸಿದರು. ಒಟ್ಟು 32.2 ಕಿ.ಮೀ. ಪುಣೆ ಮೆಟ್ರೋ ರೈಲು ಯೋಜನೆಯಲ್ಲಿ 12 ಕಿ.ಮೀ. ಮಾರ್ಗಕ್ಕೆ ಪ್ರಧಾನಿ ಚಾಲನೆ ನೀಡಿದರು. ಈ ಯೋಜನೆಯನ್ನು ಒಟ್ಟು 11,400 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಧಾನಿ ಮೋದಿ ಅವರು ಇಂದು ಪುಣೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ಪುಣೆ ಮಹಾನಗರ ಪಾಲಿಕೆಯಲ್ಲಿ ಸ್ಥಾಪಿಸಲಾಗಿರುವ ಛತ್ರಿಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಡ್ರಗ್ಸ್​ ದಂಧೆ: ವಿದೇಶಿ ಪ್ರಜೆಗಳು ಸೇರಿ ನಾಲ್ವರು ಆರೋಪಿಗಳ ಬಂಧನ

ಕಲುಷಿತ ನೀರು ಸೇವನೆ: 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಾರ್ಯಾಚರಣೆ ವೇಳೆ ನಾಲ್ಕನೇ ಅಂತಸ್ತಿನಿಂದ ಬಿದ್ದ ಅಗ್ನಿಶಾಮಕ ಸಿಬ್ಬಂದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಸ್ನೇಹಿತನೊಂದಿಗೆ ಹೊಟೇಲ್‍ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವು

 

ಇತ್ತೀಚಿನ ಸುದ್ದಿ