ಮನೆಗೆ ನುಗ್ಗಿ ಚಿನ್ನ, ಹಣ ಎತ್ತಿಕೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ!

haveri
13/03/2025

ಹಾವೇರಿ: ಕರ್ನಾಟಕದಲ್ಲಿ ಸುಗ್ರಿವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದೆ.

ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಹೋಗಿರುವ ಅಮಾನವೀಯ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಅನ್ಯಾಯಕ್ಕೊಳಗಾದ ಸಂಪವ್ವ ರಟ್ಟಿಗಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಫೈನಾನ್ಸ್ ಕಂಪೆನಿಯಲ್ಲಿ ಸಂಪವ್ವ ಕುಟುಂಬಸ್ಥರು 50 ಸಾವಿರ ಸಾಲ ಪಡೆದುಕೊಂಡಿದ್ದರು. ತಿಂಗಳಿಗೆ 1250ರಂತೆ ಪ್ರತಿ ತಿಂಗಳು ಕಟ್ಟುತ್ತಿದ್ದರು. ಸಂಪವ್ವ ತನ್ನ ಮಗಳ ಜೊತೆಗೆ ಗದ್ದೆಗೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿ ಸಿಬ್ಬಂದಿ ಸಾಲ ವಸೂಲಿಗೆ ಬಂದಿದ್ದು, ಮನೆಯಲ್ಲಿ ಇಟ್ಟಿದ್ದ 25 ಸಾವಿರ ರೂಪಾಯಿ ಹಾಗೂ ಕಿವಿ ಓಲೆಯನ್ನು ಕೊಂಡೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಾಲ ವಸೂಲಿಗೆ ವೇಳೆ ಸಾಲಗಾರರಿಗೆ ಕಿರುಕುಳ ನೀಡದಂತೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದರೂ ಮೈಕ್ರೋ ಫೈನಾನ್ಸ್ ಕಂಪೆನಿ ಸಿಬ್ಬಂದಿ ಕ್ಯಾರೇ ಅನ್ನುತ್ತಿಲ್ಲ, ಇದೀಗ ಮನೆಗೆ ನುಗ್ಗಿ ಹಣ, ಚಿನ್ನಾಭರಣ ಎತ್ತಿಕೊಂಡು ಹೋಗುವ ಮಟ್ಟಕ್ಕೆ ಮುಂದುವರಿದಿದ್ದಾರೆ. ಪೊಲೀಸರು ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

 

ಇತ್ತೀಚಿನ ಸುದ್ದಿ

Exit mobile version