ಉಘೇ ಮಾದಪ್ಪ– ಶ್ರೀಮಂತ ಮಾದಪ್ಪ: ಮಹದೇಶ್ವರನಿಗೆ ಹರಿದುಬಂತು ಕೋಟಿ ಕೋಟಿ ಹಣ
ಚಾಮರಾಜನಗರ: ಪ್ರಮಖ ಧಾರ್ಮಿಕ ಸ್ಥಳವಾದ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.86 ಕೋಟಿ ರೂ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ರಾತ್ರಿ 10:30 ಗಂಟೆಯವರೆಗೂ ನಡೆಯಿತು.
ಈ ಬಾರಿ ಅಮಾವಾಸ್ಯೆ, ಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರಿಂದ 26 ದಿನಗಳ ಅವಧಿಯಲ್ಲಿ 2 ಕೋಟಿ 86 ಲಕ್ಷದ 17 ಸಾವಿರದ 698 ರೂ. ಹಣ 90 ಗ್ರಾಂ ಚಿನ್ನ ಹಾಗೂ 2.825 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw