ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

05/04/2025
ಕಲಬುರಗಿ: ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಎಂದು ಗುರುತಿಸಲಾಗಿದೆ. ಮೃತಪಟ್ಟವರು ಬಾಗಲಕೋಟೆ ನಿವಾಸಿಗಳು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್ ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7