ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸಲು ಕೇಂದ್ರ ಸಂಪುಟ ಅನುಮೋದನೆ
ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ.
2020ರ ಸ್ವಾತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಈ ಯೋಜನೆ ಒಂದು ವರ್ಷದ ನಂತರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಹೆಣ್ಣುಮಕ್ಕಳ ವಿವಾಹದ ಕಾನೂನುಬದ್ಧ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವಕ್ಕೆ ಅನುಮತಿ ನೀಡಿದೆ.
ಸಂಪುಟ ಇದಕ್ಕೆ ಅನುಮೋದನೆ ನೀಡಿದ ಬಳಿಕ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ.ೀ ಮೂಲಕ ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದೂ ವಿವಾಹ ಕಾಯ್ದೆ 1955ರಂತಹ ವೈಯಕ್ತಿಕ ಕಾನೂನುಗಳಿಗೂ ತಿದ್ದುಪಡಿ ತರಲಾಗುತ್ತದೆ ಎಂದು ತಿಳಿದುಬಂದಿದೆ.
18 ವರ್ಷದಲ್ಲಿಯೇ ಹೆಣ್ಣಿಗೆ ಮದುವೆ ಮಾಡುವುದರಿಂದ ಆಕೆ ತಾಯ್ತನದಲ್ಲಿ ಹಲವು ಸಮಸ್ಯೆಗಳನ್ನು ಅನುಭವಿಸುತ್ತಾಳೆ. ಈಗಾಗಲೇ ತಾಯಿಯ ಮರಣದ ಪ್ರಮಾಣ ಹೆಚ್ಚಳದ ವಿಚಾರವನ್ನು ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿದೆ. ಇದಲ್ಲದೇ ತಜ್ಞರು ನೀಡಿರುವ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಕೆ ಮಾಡಲಾಗಿದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಡಾನ್ಸ್ ಮಾಡುತ್ತಿದ್ದ ಮಹಿಳಾ ಕಾರ್ಯಕರ್ತೆಯರ ಮೇಲೆ ನೋಟು ಎಸೆದ ಕಾಂಗ್ರೆಸ್ ಕಾರ್ಯಕರ್ತರು | ವಿಡಿಯೋ ವೈರಲ್
ಮತಾಂತರ ನಿಷೇಧ ಮಸೂದೆ: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಡೆದ ಚರ್ಚೆಗಳೇನು?
ರಂಗಾಯಣದಲ್ಲಿ ರಾಜಕೀಯ ನಾಟಕ: ಠಾಣೆ ಮೆಟ್ಟಿಲೇರಿದ ರಂಗಾಯಣ-ಪ್ರಗತಿಪರರ ವಿವಾದ
ನನ್ನ ಕ್ಯಾರೆಕ್ಟರ್ ಬಗ್ಗೆ ಹೇಳ್ಬೇಕಂದ್ರೆ, ನೀವು ಟ್ರೈಲರ್ ನೋಡಬೇಕು | ರಶ್ಮಿಕಾ ಮಂದಣ್ಣ
ಬೂದಿ ಮುಚ್ಚಿದ ಕೆಂಡದಂತಿದ್ದ ಉಪ್ಪಿನಂಗಡಿ ಸಹಜ ಸ್ಥಿತಿಯತ್ತ!
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಹಿತ ಗಣ್ಯರಿಂದ ಸಂತಾಪ
ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರು | ಲಖನ್ ಜಾರಕಿಹೊಳಿ