ಬಿಜೆಪಿಯ ದಯನೀಯ ಸ್ಥಿತಿಗೆ ಸಚಿವ ಈಶ್ವರ ಖಂಡ್ರೆ ಮರುಕ - Mahanayaka

ಬಿಜೆಪಿಯ ದಯನೀಯ ಸ್ಥಿತಿಗೆ ಸಚಿವ ಈಶ್ವರ ಖಂಡ್ರೆ ಮರುಕ

eshwar khandre
08/09/2023

ಬೀದರ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ 4 ಸ್ಥಾನ ಬಿಟ್ಟುಕೊಡಲು ಸಮ್ಮತಿಸಿರುವುದಾಗಿ ಬಿಜೆಪಿ ಹೇಳಿರುವುದು ರಾಜ್ಯದಲ್ಲಿ ಆ ಪಕ್ಷದ ದಯನೀಯ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಅವರು, ಕಳೆದಬಾರಿ 28 ಲೋಕಸಭಾ ಕ್ಷೇತ್ರಗಳ ಪೈಕಿ 25ರಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಥಿತಿ ತಲುಪಿದೆ. ಇದು ಮೋದಿ ಮತ್ತು ಬಿಜೆಪಿ ವರ್ಚಸ್ಸು ರಾಜ್ಯದಲ್ಲಿ ಕುಗ್ಗಿದೆ ಎಂಬುದರ ಸಂಕೇತವಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಕೇವಲ 1 ಸ್ಥಾನದಲ್ಲಿ ಮಾತ್ರ ಗೆಲ್ಲುವಂತಾಯಿತು. ಈ ಬಾರಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿದೆ. ಇದು ನಮ್ಮ ಪಕ್ಷಕ್ಕೆ ದೊಡ್ಡ ಲಾಭ ಆಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಕನಿಷ್ಠ 20 ಸ್ಥಾನದಲ್ಲಿ ಗರಿಷ್ಠ 25 ಸ್ಥಾನದಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ