ರಾಜ್ಯಪಾಲರ ಭಾಷಣ: ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರಾದ ಜೆ.ಸಿ.ಮಾಧುಸ್ವಾಮಿ‌ - Mahanayaka
8:10 PM Thursday 12 - December 2024

ರಾಜ್ಯಪಾಲರ ಭಾಷಣ: ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರಾದ ಜೆ.ಸಿ.ಮಾಧುಸ್ವಾಮಿ‌

j c madhuswamy
22/02/2023

ಮಂಗಳವಾರ ವಿಧಾನಪರಿಷತ್ ಮಧ್ಯಾಹ್ನದ ಅಧಿವೇಶನದಲ್ಲಿ ರಾಜ್ಯಪಾಲರು ವಿಧಾನಮಂಡಲದ ಶಾಸಕರನ್ನು ಉದ್ದೇಶಿಸಿ ಮಾಡಿದ ಭಾಷಣದ ಕುರಿತು ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವರಾದ ಜೆ.ಸಿ.ಮಾಧುಸ್ವಾಮಿ‌ ಉತ್ತರವನ್ನು ನೀಡಿದರು.

ರಾಜ್ಯದ ಜನತೆಗೆ ಆಶ್ರಯ ಒದಗಿಸುವುದು ಸರ್ಕಾರದ ಮೂಲಭೂತ ಕರ್ತವ್ಯಗಳಲ್ಲಿ ಒಂದು. ಈ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರವು ಆಗಸ್ಟ್ 2019 ರಿಂದ ಇಲ್ಲಿಯವರೆಗೆ ವಿವಿಧ ವಸತಿ ಯೋಜನೆಗಳಡಿ ಒಟ್ಟು 7,500 ಕೋಟಿ ರೂಪಾಯಿಗಳ ವೆಚ್ಚದಲ್ಲಿ 4.93 ಲಕ್ಷ ಮನೆಗಳನ್ನು ಪೂರ್ಣಗೊಳಿಸಿದೆ.

11 ಸಾವಿರ ನಿವೇಶನ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಒಂದು ಲಕ್ಷ ಬಹುಮಹಡಿ ಯೋಜನೆಯಡಿ ಒಟ್ಟು 59.5 ಸಾವಿರ ಬಹುಮಹಡಿ ಮನೆಗಳ ನಿರ್ಮಾಣ ಕೈಗೊಳ್ಳಲಾಗಿದೆ. 2022-23ನೇ ಸಾಲಿನಲ್ಲಿ ನೆರೆಯಿಂದ 69 ಸಾವಿರ ಮನಗಳು ಹಾನಿಗೊಳಗಾಗಿದ್ದು ಹಿಂದಿನ ಸಾಲಿನ ಮನೆಗಳೂ ಒಳಗೊಂಡಂತೆ ಪ್ರಗತಿಗೆ ಅನುಗುಣವಾಗಿ ಒಟ್ಟು 734 ಕೋಟಿ ರೂಪಾಯಿಗಳ ಅನುದಾನವನ್ನು ಡಿಬಿಟಿ ಮುಖೇನ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ. ಮಾಲೀಕತ್ವದಲ್ಲಿರುವ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ 3.36 ಲಕ್ಷ ಕುಟುಂಬಗಳಿಗೆ ಬಹುಮಾಲಿಕತ್ವದ ಹಕ್ಕುಪತ್ರ ನೀಡಲು ತೀರ್ಮಾನಿಸಿದ್ದು, ಇಲ್ಲಿಯವರೆಗೆ 1.15 ಲಕ್ಷ ಕುಟುಂಬಗಳಿಗ ಹಕ್ಕುಪತ್ರ ನೀಡಲಾಗಿದೆ. ಕರ್ನಾಟಕ ಗೃಹಮಂಡಳಿಯ ವಿವಿಧ ಯೋಜನೆಗಳಿಂದ ಸುಮಾರು 725 ಕೋಟಿ ರೂಪಾಯಿ ಮೊತ್ತದ 5324 ಸ್ವತ್ತುಗಳನ್ನು ಹಂಚಿಕೆ ವಿಲೇವಾರಿ ಮಾಡಲಾಗಿದೆ ಎಂದರು.

1475 ತಾಂಡಾ, ಗೊಲ್ಲರಹಟ್ಟಿ, ಕುರುಬರಹಟ್ಟಿ ಮತ್ತು ಇತರ ದಾಖಲೆ ರಹಿತ ಜನ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಿದ್ದು, ಇತ್ತೀಚಿಗೆ ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಮಾನ್ಯ ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ 52,000 ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿ, ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ ಎಂದರು.

ನಮ್ಮ ಸರ್ಕಾರವು 2022-23ನೇ ಸಾಲಿನಲ್ಲಿ ಉಂಟಾದ ಅತಿವೃಷ್ಟಿ ಹಾಗೂ ಪುವಾಹದಿಂದ ಬೆಳೆ ನಷ್ಟ ಅನುಭವಿಸಿದ 14.63 ಲಕ್ಷ ರೈತರಿಗೆ 2031 ಕೋಟಿ ರೂಪಾಯಿಗಳ ಪರಿಹಾರ ವಿತರಿಸಿದೆ. ಈ ಪರಿಹಾರ ಮೊತ್ತವು ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್. ನಿಗದಿಪಡಿಸಿದ ಪರಿಹಾರದೊಂದಿಗೆ ಹೆಚ್ಚುವರಿ ಪರಿಹಾರವನ್ನು ರಾಜ್ಯ ಸರ್ಕಾರದ ಬೊಕ್ಕಸದಿಂದ ಒದಗಿಸಲಾಗಿದೆ ಎಂದರು.

ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ನಗದು ರಹಿತ – ವೈದ್ಯಕೀಯ ಸೌಲಭ್ಯ ಕಲ್ಪಿಸುವ ನೂತನ ಯೋಜನೆಯಾದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸಿದೆ. ಯಶಸ್ವಿನಿ ಯೋಜನೆಯನ್ನು ಇದೇ ಜನವರಿಯಿಂದ ಮರು ಜಾರಿಗೊಳಿಸಲಾಗಿದೆ. ಆಯುಷ್ಮಾನ್ ಕಾರ್ಡ್ ಗಳನ್ನು ಅರ್ಹರಿಗೆ ವಿತರಿಸಲಾಗಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ