ಮಣಿಪುರ ಸಂತ್ರಸ್ತರ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವ ಜಮೀರ್ ಅಹಮದ್

ಬೆಂಗಳೂರು :ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ತುತ್ತಾಗಿ ಆಶ್ರಯ ಅರಸಿ ಬಂದ ವಿದ್ಯಾರ್ಥಿಗಳ ಜತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇಂದು ಹುಟ್ಟುಹಬ್ಬ ಆಚರಿಸಿಕೊಂಡರು.
ಚಾಮರಾಜ ಪೇಟೆಯ ಸೆಂಟ್ ತೆರೆಸಾ ಶಿಕ್ಷಣ ಸಂಸ್ಥೆ ಯಲ್ಲಿ ಆಶ್ರಯ ಪಡೆಯುತ್ತಿರುವ 29 ವಿದ್ಯಾರ್ಥಿನಿಯರ ಸಂಪೂರ್ಣ ಶಿಕ್ಷಣ ಹಾಗೂ ಹಾರೈಕೆ ವೆಚ್ಚ ಭರಿಸುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿ ಎರಡು ಲಕ್ಷ ರೂ. ನೀಡಿದರು.
ಮಣಿಪುರ ವಿದ್ಯಾರ್ಥಿಗಳ ಜತೆ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಸಚಿವರು ಮಾಹಿತಿ ಪಡೆದರು.
ಅಲ್ಲಿ ಉಂಟಾಗಿರುವ ಭಯಾನಕ ಪರಿಸ್ಥಿತಿ ಗೆ ಹೆದರಿ ಬಂದಿರುವುದಾಗಿ ಸೆಂಟ್ ತೆರೇಸಾ ಸಂಸ್ಥೆ ಯ ತಂಡ ತಮಗೆ ಆಶ್ರಯ ನೀಡಿ ಶಿಕ್ಷಣ ಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಮಾಹಿತಿ ನೀಡಿದರು.
ಇಲ್ಲಿ ಸುರಕ್ಷಿತ ವಾಗಿರಿ ನಿಮಗೆ ಏನೇ ಬೇಕಾದರೂ ನಾನೇ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಮಣಿಪುರ ವಿದ್ಯಾರ್ಥಿಗಳ ಜತೆಯೇ ಉಪಹಾರ ಸೇವಿಸಿ ಸಂಸ್ಥೆ ಯಲ್ಲಿ ವ್ಯಾಸಂಗ ಮಾಡುತ್ತಿರುವ 250 ಮಕ್ಕಳಿಗೂ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ರಾತ್ರಿ ಊಟದ ವ್ಯವಸ್ಥೆ ಮಾಡಿದರು. ಸೆಂಟ್ ತೆರೇಸಾ ವಿದ್ಯಾ ಸಂಸ್ಥೆಯ ಶಿಕ್ಷಕ ವರ್ಗ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw