ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ಜನಾಕ್ರೋಶದ ಬೆನ್ನಲ್ಲೇ ಸ್ಥಳಕ್ಕೆ ಸಚಿವ ಜಮೀರ್ ಭೇಟಿ, ಪರಿಹಾರ ವಿತರಣೆ

ಬೆಂಗಳೂರು: ನೀರು ಹಿಡಿಯಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆ ಸಾವನ್ನಪ್ಪಿದ ಘಟನೆ ಹಿನ್ನೆಲೆ ಸಚಿವ ಜಮೀರ್ ಅಹ್ಮದ್ ಖಾನ್ ಮೃತ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ್ದಾರೆ.
ಬೆಳಿಗ್ಗೆ ಕಾವೇರಿ ನೀರು ಹಿಡಿಯುತ್ತಿದ್ದ ವೇಳೆ ಸೆಲ್ವಿ ಎಂಬ ಮಹಿಳೆ ಮೈನ್ ಲೈನ್ ನಿಂದ ಮೋಟಾರ್ ಆನ್ ಮಾಡುವ ವೇಳೆ ವಿದ್ಯುತ್ ಶಾಕ್ ಗೊಳಗಾಗಿ ಸಾವನ್ನಪ್ಪಿದ್ದರು.
ಚಾಮರಾಜಪೇಟೆ ಆನಂದಪುರದಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ ಎಂಬ ಮಾತುಗಳು ಕೇಳಿಬಂದಿವೆ. ದೊಡ್ಡ ಪೈಪ್ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನಿಡಲಾಗಿದ್ದು, ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾಳೆಂದು ವರದಿಗಳು ತಿಳಿಸಿವೆ
ಸೆಲ್ವಿ ಮೃತಪಟ್ಟ ಹಿನ್ನೆಲೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆ.ಆರ್.ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಪರದಾಡಿದ್ದರು.
ಸಚಿವರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸ್ಥಳೀಯರು ಇಲ್ಲಿನ ಟಿಪ್ಪು ನಗರದಲ್ಲಿ ಮುಸ್ಲಿಮರ ಸಂಖ್ಯೆ ಜಾಸ್ತಿ ಇದ್ದು ಅಲ್ಲಿಗೆ ಉತ್ತಮ ವ್ಯವಸ್ಥೆ ಇದೆ. ಹಿಂದೂಗಳು ವಾಸಮಾಡುತ್ತಿರುವ ಈ ಸ್ಥಳಕ್ಕೆ ನೀರಿನ ವ್ಯವಸ್ಥೆ ಇಲ್ಲ, ಇದನ್ನು ಪ್ರಶ್ನಿಸಿದರೆ, ಇದು ಸ್ಲಂ ಅನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಘಟನೆಯ ಸುದ್ದಿ ತಿಳಿದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಪ್ರತಿಭಟನಾನಿರತ ಜನರು ಜಮೀರ್ ಅವರಿಗೆ ಮುತ್ತಿಗೆ ಹಾಕಿ ಸಮಸ್ಯೆ ಕುರಿತು ಧ್ವನಿ ಎತ್ತಿದರು. ಬಳಿಕ ಸಚಿವರು ಮೃತಳ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: